ದಾವಣಗೆರೆ : ನಗರದ ಆರ್‌ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನೆಕೊಂಡ ಬಸವೇಶ್ವರ ದೇವಸ್ಥಾನದಿಂದ ಕಲ್ಲೇಶ್ವರ ಮಿಲ್ ಕಡೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಭಯ ಉಂಟು ಮಾಡುವಂತೆ ಒಂದು ಕಬ್ಬಿನ ಲಾಂಗ್ ಆಯುಧವನ್ನು ಹಿಡಿದು ಕೊಂಡು ಓಡಾಡಿದ ವ್ಯಕ್ತಿಯನ್ನು ಆರ್‌ಎಂಸಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಟಿಪ್ಪು ನಗರದ ಅಬ್ದುಲ್ ಸಮದ್ ಬಂಧಿತ ಆರೋಪಿ.
ಕಬ್ಬಿನ ಲಾಂಗ್ ಆಯುಧ ಹಿಡಿದು ಜನರಲ್ಲಿ ಭಯ ಪಡಿಸಿ ಅಶಾಂತಿಯನ್ನುAಟು ಮಾಡುವಂತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಹರಿದಾಡಿರುತ್ತದೆ. ವಿಡಿಯೋ ಆಧರಿಸಿ ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
Read also : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ಅಮಾನತು
ಸಾರ್ವಜನಿಕರಿಗೆ ಭಯ ಉಂಟು ಮಾಡುವಂತೆ ಆಯುಧಗಳನ್ನು ಹಿಡಿದು ಸಾರ್ವಜನಿಕವಾಗಿ ಅಡ್ಡಾಡುವುದು ಹಾಗೂ ಅಶಾಂತಿ ಉಂಟು ಮಾಡುವಂತೆ ವರ್ತಿಸುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಎಚ್ಚರಿಕೆ ನೀಡಿದೆ.