Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಕರಡು ಮತದಾರರ ಪಟ್ಟಿ ಪ್ರಕಟ
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಕರಡು ಮತದಾರರ ಪಟ್ಟಿ ಪ್ರಕಟ

Dinamaana Kannada News
Last updated: January 3, 2026 11:36 am
Dinamaana Kannada News
Share
Davanagere
SHARE
ದಾವಣಗೆರೆ ಜ.03: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತದಾರರ ಪಟ್ಟಿ ಪ್ರಕಟಿಸುವ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2026 ಜನವರಿ 1 ಕ್ಕೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜನವರಿ 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆಬ್ರವರಿ 14 ರಂದು ಪ್ರಕಟಿಸಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4907 ಯುವ ಮತದಾರರು, 2542 ವಿಶೇಷಚೇತನ ಮತದಾರರು, 45 ಇತರೆ ಮತದಾರರು, 85 ವರ್ಷ ಮೇಲ್ಪಟ್ಟ ಮತದಾರರು 1838 , ವಿದೇಶಿ ಮತದಾರರ 1 ಮತದಾರರು ಇದ್ದು, ಈ ಪೈಕಿ 113555 ಪುರುಷ, 117558 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,31,158 ಮತದಾರಿದ್ದು, ಒಟ್ಟು 284 ಮತಗಟ್ಟಿಗಳನ್ನೊಳಗೊಂಡಿದೆ ಎಂದು ಮಾಹಿತಿ ನೀಡಿದರು.
ರಾಷನಲೈಸೇಷನ್ ಪ್ರಕ್ರಿಯೆ:
ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು 300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
Read also : ಎಸ್‌ಐಆರ್‌(SIR)ಕುರಿತು ಜಾಗೃತಿ ಸಭೆ:ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ
ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ. ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್ ಮುಖಾಂತರ ಸಲ್ಲಿಸಬಹುದು ಎಂದು ತಿಳಿಸಿದರು.
ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್‌ಲೈನ್ https://voters.eci.gov.in/  ಮುಖಾಂತರ ಮತದಾರರ ಪಟ್ಟಿಗೆ ಸಂಬAಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ವಿವಿಧ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಸ್ತಾಂತರಿಸಲಾಯಿತು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
TAGGED:Davanagere NewsDavangere South Assembly Constituencydinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಎಸ್‌ಐಆರ್‌(SIR)ಕುರಿತು ಜಾಗೃತಿ ಸಭೆ:ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ
Next Article extended ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎ.ವಿ.ಕಮಲಮ್ಮ ಮಹಿಳಾ ಕಾಲೇಜ್ : ತಂಬಾಕು ಸೇವನೆ ಜಾಗೃತಿ ಕಾರ್ಯಕ್ರಮ

ದಾವಣಗೆರೆ : ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ 'ತಂಬಾಕು ಸೇವನೆ ಯಿಂದಾಗುವ ದುಷ್ಪರಿಣಾಮಗಳ ಅರಿವು ಕುರಿತು ಜಾಗೃತಿ' ಕಾರ್ಯಕ್ರಮ…

By Dinamaana Kannada News

ಪತಂಜಲಿ ಯೋಗ ಸಂಸ್ಥೆ | ಯೋಗದಿಂದ ಆತ್ಮಬಲ ವೃದ್ಧಿ: ಭವರ್‌ಲಾಲ್ ಆರ್ಯ

ದಾವಣಗೆರೆ (Davanagere): ಯೋಗ ಬಲದಿಂದ ಆತ್ಮಬಲ ಹೆಚ್ಚಾಗುತ್ತದೆ. ಆತ್ಮ ಬಲದಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ. ಯೋಗ ನಿರಂತರ ಅಭ್ಯಾಸದಿಂದ ಉತ್ತಮ ಆರೋಗ್ಯ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 63 : ಎಲೆಕ್ಷನ್ನು….

Kannada News | Sanduru Stories | Dinamaana.com | 23-06-2024 ಕೆಂಪು ಧೂಳು ಬಿಟ್ಟು ಹೋದವರು.. (Sanduru Stories)…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?