Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಯಕತ್ವ ಗುಣವನ್ನು ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಡಾ.ದಳಪತಿ
ತಾಜಾ ಸುದ್ದಿ

ನಾಯಕತ್ವ ಗುಣವನ್ನು ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಡಾ.ದಳಪತಿ

Dinamaana Kannada News
Last updated: June 17, 2024 12:22 pm
Dinamaana Kannada News
Share
Davanagere
ದಾವಣಗೆರೆ ವಿಶ್ವವಿದ್ಯಾನಿಲಯ
SHARE

ದಾವಣಗೆರೆ:  ಸಾಮಾಜಿಕ ಸಂಬಂಧಗಳ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಕನಾಟಕ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ದಳಪತಿ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಶಿಸ್ತು, ಕರ್ತವ್ಯ ನಿಷ್ಠೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ನೆರವಾಗುವುದು. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಜೊತೆಗೆ ಸ್ನೇಹ, ವಿಶ್ವಾಸಾರ್ಹತೆ ಮತ್ತು ಬಾಂಧವ್ಯವನ್ನು ಬೆಸೆಯಲು ಯುವಜನೋತ್ಸವ ಉತ್ತಮ ವೇದಿಕೆಯಾಗಿದೆ. ಕಾಯಕ, ಮನಸ್ಸು ಮತ್ತು ಹೃದಯದಿಂದ ಚಟುವಟಿಕೆ ನಡೆಸುವ ಸರ್ಕಾರದ ಪ್ರಾಯೋಜಿತ ಏಕೈಕ ಯುವ ಸಂಘಟನೆಯಾಗಿದೆ ಎಂದರು.

ಯುವಜನೋತ್ಸವವು ರಾಜ್ಯದ ಬೇರೆ ಬೇರೆ ಪ್ರದೇಶದ ಸಾಂಸ್ಕೃತಿಕ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ ಎನ್‌ಎಸ್‌ಎಸ್‌ನಂತಹ ಪಠ್ಯೇತರ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬದುಕನ್ನು ವಿಕಸನ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಇಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಉತ್ತಮ ಅವಕಾಶಗಳನ್ನು ಪಡೆಯಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಯುವಜನೋತ್ಸವದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ವೀ.ಪಾಳೇದ, ಶಿಬಿರಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವದ ಮೂಲಕ ತಮ್ಮಲ್ಲಿರುವ ಸಾಮರ್ಥ್ಯ ಪ್ರದರ್ಶನಕ್ಕೆ ಮಾತ್ರ ಸ್ಪರ್ಧೆಗಳು ನಡೆಯುತ್ತವೆ. ಆದರೆ ಎಲ್ಲ ವಿದ್ಯಾರ್ಥಿಗಳ ನಡುವೆ ಸೌಹಾರ್ದಯುತ ಸಂಬಂಧ ಬೆಸೆಯುವುದು, ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ.ಪಿ.ಅಣ್ಣೇಶ, ಜಿ.ಮಂಜುನಾಥ, ಡಾ.ತಿಪ್ಪೇಸ್ವಾಮಿ, ಲೋಕೇಶ ನಾಯಕ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 57 : ಪಕ್ಷದ ಟಿಕೇಟ್ ಕೊಡಿಸಿದವರಿಗೇ ಹತ್ತು ಕೋಟಿ!
Next Article Davanagere ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.06  ಪ್ರಸಕ್ತ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ವರೆಗೆ ರಾಜ್ಯದಲ್ಲಿರುವ ಹಾಗೂ…

By Dinamaana Kannada News

‘ಸಪ್ದರ್ ಜೀವಿಸಿದ್ದರೆ’ ಪ್ಯಾಸಿಸಂ ವಿರುದ್ದ ಬೀದಿಯಲ್ಲಿರುತ್ತಿದ್ದರು..

'ಸಪ್ದರ್ ಹಷ್ಟೀ ಸ್ವತಃ ಕಲಾವಿದ ಹಾಗೂ ಪತ್ರಕರ್ತರಾಗಿದ್ದವರು. ಅವರದ್ದು ಕೇವಲ 34 ವರ್ಷಗಳ ಕಿರಿಯ ಕ್ರಾಂತಿಕಾರಿ ಬದುಕು. ಆದರೆ ಆ…

By Dinamaana Kannada News

Davanagere news | ರೈತರನ್ನು ಒಕ್ಕಲೆಬ್ಬಿಸದಂತೆ ಶಾಸಕ ಕೆ.ಎಸ್.ಬಸವಂತಪ್ಪ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮನವಿ

ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?