ದಾವಣಗೆರೆ (Davanagere) : ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಧೃಡಗೊಳ್ಳವ ಕಡೆಗೆ ಗಮನಹರಿಸಬೇಕೆ ಹೊರತು ಪ್ರತಿ ಸ್ಪರ್ಧಿಯನ್ನು ಸೋಲಿಸುವ ತಂತ್ರದಕಡೆಗಲ್ಲ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ, ಪ್ರಜ್ಞೆ, ಸೇವಾ ಮನೋಭಾವದೊಂದಿಗೆ ಉತ್ತಮ ಪ್ರಜೆಯಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತಾರಾಗಬೇಗೆಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಸಚಿವ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ವಸಂತ್ ಶೆಟ್ಟಿ ಹೇಳಿದರು.
ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ ಬೆಂಗಳೂರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಎನ್‌ಎಸ್‌ಎಸ್ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಹಸಿವು ಹೆಚ್ಚಾದಾಗ ಮಾತ್ರ ಬೇರೆ ಬೇರೆ ಆಲೋಚನೆಗಳನ್ನು ಬಿಟ್ಟು ಗುರಿಯಡೆಗೆ ಯೋಚಿಸಲು ಸಾಧ್ಯವಾಗುತ್ತದೆ. ಬಡತನ ಹಾಗೂ ಅಡತಡೆಗಳನ್ನು ಸಾಕಷ್ಟು ಅನುಭವಿಸದವನು ಮಾತ್ರ ಅತೀ ವೇಗದಲ್ಲಿ ಗುರಿ ತಲಪುತ್ತಾನೆ. ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಲು ಸೀಮಿತವಾಗಿ ಯೋಚಿಸದೆ ಸಾಮಾಜಿಕ ಸೇವೆಯಲ್ಲೂ ಸಕ್ರಿಯಾರಾಗಿ ಪಾಲೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಕುಲಪತಿ ಪ್ರೊ. ಬಿ ಡಿ ಕುಂಬಾರ ಮಾತನಾಡಿ, ರಾಜ್ಯದಲ್ಲಿ ಎನ್.ಎಸ್.ಎಸ್. ಸ್ವಯಂ ಸೇವಕರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರಮದಾನದ ಜೊತೆಗೆ ಆರೋಗ್ಯ ಅರಿವು, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಎನ್.ಎಸ್.ಎಸ್. ಸ್ವಯಂ ಸೇವಕರ ಸಂಖ್ಯೆ ಹೆಚ್ಚಿಸುವುದರಿಂದ ಹೆಚ್ಚಿನ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ ಹಾಗೂ ಯಾವುದೇ ಕೆಲಸ ನಿರ್ವಹಿಸುವಾಗ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಮೀರಿ ಪ್ರಯತ್ನ ಮಾಡಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಡಿ.ಕಾರ್ತಿಗೆಯನ್ ಪ್ರಾದೇಶಿಕ ನಿರ್ದೇಶಕರು ಪ್ರಾದೇಶಿಕ ನಿರ್ದೇಶನಾಲಯ ಭಾರತ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ. ರಮೇಶ್, ಎಸ್. ಎನ್ ಎಸ್ ಎಸ್ ರಾಜ್ಯ ಯುವ ಘಟಕ ಅಧಿಕಾರಿ ವೈ ಎಂ ಉಪ್ಪಿನ್, ಶ್ರೀಧರ್ ಜಿ, ಎನ್ ಎಸ್ ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಅಶೋಕ್‌ಕುಮಾರ್ ವಿ ಪಾಳೇದ ಉಪಸ್ಥಿತರಿದ್ದರು.
Read also : Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ