ದಾವಣಗೆರೆ (DAVANAGERE) : ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‌ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ 12 ಗಂಟೆ ವರೆಗೆ ನಡೆಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read also : DAVANAGERE : ಸಿದ್ದು (Siddaramaiah) ಈಗ ಔಟ್ ಆಫ್ ಡೇಂಜರ್?
ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ನಿಗದಿತ ದಿನಾಂಕದAದು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಚಾರ್ಯರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.