ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್‌ಸಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅನೇಕ ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಕ್ಕಬೇಕಾದ ವಿದ್ಯಾರ್ಥಿವೇತನ (Scholarship) ಇನ್ನೂ ಲಭ್ಯವಾಗದ ಕಾರಣದಿಂದಾಗಿ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಲಾಗಿದೆ.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ತಾಹಿರ್ ಸಮೀರ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿನಿಧಿ ಮಂಡಳಿ ಕುಲಪತಿ ಹಾಗೂ ಕುಲಸಚಿವರನ್ನು ಭೇಟಿಯಾಗಿ ಕಾಲೇಜು ಶುಲ್ಕ ಪಾವತಿಸಲು ಅಸಾಧ್ಯ ಸ್ಥಿತಿಯಲ್ಲಿದ್ದೇವೆ ಎಂದು ವಿದ್ಯಾರ್ಥಿಗಳು ವಿವರಿಸಿದ ಬಳಿಕ ಕುಲಪತಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.5 ರಂದು ನಡೆಯಬೇಕಿದ್ದ ಎಂಎಸ್‌ಸಿ ಪರೀಕ್ಷೆಯನ್ನು ಆ.11ರ ವರೆಗೆ ಮುಂದೂಡಲು ತಾತ್ಕಾಲಿಕ ನಿರ್ಧಾರ ತೆಗೆದುಕೊಂಡಿದ್ದಾರೆ.
Read also : ಇಸ್ರೋ ತರಬೇತಿ ಕಾರ್ಯಕ್ರಮಗಳ ವಿವರ: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದೆ ಡಾ.ಪ್ರಭಾ
ವಿದ್ಯಾರ್ಥಿಗಳು ಅನುಭವಿಸುತ್ತಿರುವ ಆರ್ಥಿಕ ಬಡತನ ಹಾಗೂ ವಿದ್ಯಾರ್ಥಿವೇತನ ವಿಳಂಬದ ಪರಿಣಾಮವಾಗಿ ಉದ್ಭವಿಸಿದ ಸಮಸ್ಯೆಯನ್ನು ಪರಿಗಣಿಸಿ, ವಿದ್ಯಾರ್ಥಿಗಳ ಶಿಕ್ಷಣ ಹಕ್ಕುಗಳು ಹಾನಿಯಾಗದಂತೆ, ಅವರಿಗೆ ಅಗತ್ಯವಾದ ಸಹಕಾರವನ್ನು ನೀಡಲು ವಿಶ್ವವಿದ್ಯಾನಿಲಯ ಬದ್ಧವಾಗಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.