ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರಸನ್ನಕುಮಾರ ಅವರು ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗಾಗಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ೨೦೨೩ನೇ ಸಾಲಿಗಾಗಿ ಪ್ರೊ.ಪ್ರಸನ್ನಕುಮಾರ ಅವರನ್ನು ಆಯ್ಕೆ ಮಾಡಲಾಗಿದೆ. ಗಣಿತಶಾಸ್ತç ಕ್ಷೇತ್ರಕ್ಕೆ ನೀಡಿರುವ ವಿಶಿಷ್ಟ ಸಂಶೋಧನೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶ್ನೆಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆಯ ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೊ.ಪ್ರಸನ್ನಕುಮಾರ ಅವರು ಕಳೆದ ನಾಲ್ಕು ವರ್ಷಗಳಿಂದ ಸ್ಟಾöನ್‌ಫೋರ್ಡ್ ವಿಶ್ವವಿದ್ಯಾಲಯ ಸಿದ್ಧಪಡಿಸಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪ್ರೊ.ಪ್ರಸನ್ನಕುಮಾರ ಅವರು ತಮ್ಮ ಜೊತೆಗೆ ಸಂಶೋಧನಾ ವಿದ್ಯಾರ್ಥಿಗಳಿಗೂ ಸಂಶೋಧನೆಯಲ್ಲಿ ಉತ್ತಮ ಮಾರ್ಗದರ್ಶನ ನೀಡಿ, ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಮಾಡಿದ್ದಾರೆ. ಗಣಿತಶಾಸ್ತçದಲ್ಲಿ ಅಧ್ಯಾಪನ, ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶೇಷ ಕೊಡುಗೆ ನೀಡಿದ್ದನ್ನು ಗಮನಿಸಬಹುದು.
ಸೆಪ್ಟೆಂಬರ್ 26 ರಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಆವರಣದ ಜೆ.ಎನ್.ಟಾಟಾ ಸಭಾಭವನದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಪ್ರೊ.ಪ್ರಸನ್ನಕುಮಾರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಡಾ.ಕೌರ್ ಹೇಳಿದ್ದಾರೆ.
Read also : Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ
ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಪ್ರೊ.ಪ್ರಸನ್ನಕುಮಾರ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವ ಪ್ರೊ.ಆರ್.ಶಶಿಧರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ದಾವಣಗೆರೆ ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘದ ಅಧ್ಯಕ್ಷ ಶಿವಕುಮಾರ ಕಣಸೋಗಿ ಅಭಿನಂದಿಸಿದ್ದಾರೆ.