Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  
ತಾಜಾ ಸುದ್ದಿ

Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

Dinamaana Kannada News
Last updated: November 5, 2024 4:24 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ.ನ.5 (Davanagere)  : ಗ್ರಾಮೀಣಭಾಗದ ಸರ್ಕಾರಿ ಶಾಲೆ,ಆಸ್ಪತ್ರೆಗಳ ಸುಧಾರಣೆ ಮಾಡಬೇಕು.ಆರೋಗ್ಯ ಶಿಬಿರ ಹಾಗೂ ಸ್ವಚ್ಚತೆ ಮೂಲಕ ಮಾದರಿಯಾಗಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್  ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ  ಸಲಹೆ ನೀಡಿದರು.

ಮಂಗಳವಾರ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಎಸ್ ಎಸ್ ಮಲ್ಲಿಕಾರ್ಜುನ್  ಸಭಾಂಗಣದಲ್ಲಿ  ದಾವಣಗೆರೆ ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೊಂದಿಗೆ ಸುದೀರ್ಘ  ಸಭೆ ನಡೆಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ  ಪಿಡಿಓ ಅಧಿಕಾರಿಗಳು  ಹೊಸ, ಹೊಸ ಯೋಜನೆಗಳ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮಾಡಬೇಕು. ಬಹಳಷ್ಟು ಗ್ರಾಮೀಣ ಭಾಗದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ದೂರು ಜನರಿಂದ ಬರುತ್ತಿವೆ. ಇದಕ್ಕೆ ಅವಕಾಶ ನೀಡದಂತೆ ಕೆಲಸ ಮಾಡಬೇಕು.ಒಂದು ವೇಳೆ ದೂರುಗಳು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜನರು ಸಮಸ್ಯೆ ಹೇಳಿಕೊಂಡು ನಮ್ಮ ಬಳಿ ಬಂದಾಗ. ನಮ್ಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಡುವುದಿಲ್ಲ ಎಂದು ಸಬೂಬು ಹೇಳದೆ ಜನರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಆಂದೋಲನ ನಡೆಸಿ ಬರುವ ಜನವರಿ 1 ರೊಳಗಾಗಿ ಇ- ಸ್ವತ್ತು ದಾಖಲೆ ವಿತರಿಸಬೇಕೆಂದು ಅವರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳುತ್ತೇವೆ, ಅದಕ್ಕೆ ತಕ್ಕನಾಗಿ ಕೆಲಸ ಮಾಡುವುದು ಎಲ್ಲರ ಜವಾಬ್ದಾರಿ. ಅದನ್ನು ಅರಿತು ಅಧಿಕಾರಿಗಳು ಜನಪರ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲೆ ಬಿಟ್ಟು ಹೋಗಬಹುದು ಎಂದು ಖಡಕ್‌ ಎಚ್ಚರಿಕೆ ನೀಡಿದ ಸಂಸದರು ಜನರ ಕೆಲಸ ಮಾಡುವ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸುವುದಾಗಿಯೂ ಹೇಳಿದರು.

ಸರ್ಕಾರಿ ಸೌಲಭ್ಯಗಳು ಪಂಚಾಯತಿಯ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ತಲುಪಬೇಕು. ಈ ಬಗ್ಗೆ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಬೇಕು.ಗ್ರಾಮೀಣ ಭಾಗದ ಜನರು   ಮೂಲಭೂತ ಸೌಕರ್ಯ ಒದಗಿಸುವಂತೆ ನನ್ನ ಬಳಿ ಬಂದು‌ ಮನವಿ ಸಲ್ಲಿಸುತ್ತಾರೆ ಎಂದರೆ,  ಪಿಡಿಓಗಳು ಕೆಲಸ ಮಾಡುತ್ತಿಲ್ಲ ಎಂದಾಗುತ್ತದೆ.  ಅದಕ್ಕೆ ಅವಕಾಶ ನೀಡದಂತೆ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಜನರಿಗೆ ಸ್ಪಂದಿಸಬೇಕು ಎಂದರು.

ಇದು ಪಿಡಿಓ ಅಧಿಕಾರಿಗಳೊಂದಿಗೆ ನಡೆಸಿದ ಮೊದಲ ಸಭೆ ಹಾಗೂ ಕೊನೆಯ ಎಚ್ಚರಿಕೆ ಎಂದು ತಿಳಿಸಿದ ಅವರು ಅಧಿಕಾರಿಗಳಿಗೆ ಕೆಲಸ ಮಾಡುವಂತೆ ಚುರುಕು‌ ಮುಟ್ಟಿಸಿದರು.

Read also : Davanagere Crime | ಇನ್ಸೂರೆನ್ಸ್‌ ಹಣದಾಸೆಗೆ ಸ್ನೇಹಿತರ ಜೊತೆ ಸೇರಿ ಸಂಬಂಧಿ ಕೊಲೆ : ಬಂಧನ

ಸಭೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್ ಮೊದಲಾದವುಗಳ ಅಭಿವೃದ್ಧಿಗೆ ಒತ್ತು ನೀಡುವುದು ಹಾಗೂ ಸರ್ಕಾರಿ ಶಾಲೆಗಳ ಗುಣಮಟ್ಟ ಮತ್ತು ಗ್ರಾಮೀಣ ಆರೋಗ್ಯ ಕೇಂದ್ರಗಳ  ಲಭ್ಯತೆಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸ್ಥಾಯಿ ಸಮಿತಿ  ಹಾಗೂ ಶಿಕ್ಷಣ ಸಚಿವಾಲಯದ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದಾವಣಗೆರೆ ಜಿಲ್ಲೆಯಲ್ಲಿ ಆರೋಗ್ಯ ಹಾಗೂ ಶಿಕ್ಷಣ ಸುಧಾರಣಾ ಮೇಲಿನ ಯೋಜನೆಗಳು, ಮತ್ತು ನಿರುದ್ಯೋಗ ನಿವಾರಣಾ ಯೋಜನೆಗಳನ್ನು ಪರಿಣಾಮಕಾರಿ ರೀತಿಯಲ್ಲಿ ಜನತೆಗೆ ತಲುಪಿಸಲು ಪಿಡಿಓ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere Crime | ಇನ್ಸೂರೆನ್ಸ್‌ ಹಣದಾಸೆಗೆ ಸ್ನೇಹಿತರ ಜೊತೆ ಸೇರಿ ಸಂಬಂಧಿ ಕೊಲೆ : ಬಂಧನ
Next Article Davanagere Davanagere | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime News | ಸಾಲಬಾಧೆ : ರೈತ ಆತ್ಮಹತ್ಯೆ

ದಾವಣಗೆರೆ (Davanagere): ಸಾಲಬಾಧೆ ತಾಳಲಾರದೆ ಜೋಳಕ್ಕಿಡುವ ಗುಳಿಗೆ ನುಂಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗುಮ್ಮನೂರು ಗ್ರಾಮದಲ್ಲಿ ಗುರುವಾರ…

By Dinamaana Kannada News

Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

ದಾವಣಗೆರೆ  (Davangere)  : ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

By Dinamaana Kannada News

DAVANAGERE NEWS : ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ .ಆ 06 (DAVANGERE ) ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸ್ತಕ ಸಾಲಿಗೆ ಜುಲೈ ಆವೃತ್ತಿಗೆ ಯುಜಿಸಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?