ದಾವಣಗೆರೆ ಅ.15: ನಗರದಲ್ಲಿನ ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಗುರುತಿಸಿರುವ ಅಪಘಾತ ಮತ್ತು ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಬೇಕು. ಅಗತ್ಯ ಸಂಚಾರಿ ಹಾಗೂ ಸೂಚನಾ ಫಲಕ ಅಳವಡಿಸಬೇಕು. ಇತ್ತೀಚೆಗೆ ಚನ್ನಗಿರಿ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಮಹಿಳೆಯರೇ ಹೆಚ್ಚು ತೊಂದರೆಗೊಳಗಾಗುತ್ತಿದ್ದಾರೆ. ಆದುದರಿಂದ ತ್ವರಿತವಾಗಿ ರಸ್ತೆ ದುರಸ್ಥಿಗೊಳಿಸಬೇಕು. ರಸ್ತೆ ಬ್ಲಾಕ್ ಸ್ಪಾಟ್‌ಗಳನ್ನು ಮುಚ್ಚಬೇಕಾದರೆ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಅಪಘಾತವಲಯಗಳನ್ನು ಗರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೇ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೊಸ ಕುಂದುವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ – 48 ಅಂಡರ್ ಪಾಸ್ ಕಾಮಗಾರಿ ಹಾಗೂ ದಾವಣಗೆರೆ- ಚನ್ನಗಿರಿ ಹೊರ ವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ -369 ಕಾಮಗಾರಿ ವಿಳಂಭ ವಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ರಸ್ತೆಯ ಇಕ್ಕೆಲಗಳ ಸರ್ವೀಸ್ ರಸ್ತೆ ಕಾಮಗಾರಿ, ತ್ವರಿತವಾಗಿ ಪೂರ್ಣಗೊಳಿಸಬೇಕು.
ರಸ್ತೆಯ ಬದಿಯಲ್ಲಿ ಬೀದಿ ದೀಪಗಳಿಲ್ಲ. ಬೀದಿ ದೀಪ ಅಳವಡಿಸಿ ಅಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಆನಗೋಡು ಗ್ರಾಮದ ಬಳಿ ಸರ್ವೀಸ್ ರಸ್ತೆಯ ಪಕ್ಕದಲ್ಲಿಯೇ ಡಾಬಾ, ಹೊಟೇಲ್‌ಗಳು ಇರುವುದರಿಂದ ಏಕಾಏಕಿ ತಿರುವು ಪಡೆದುಕೊಳ್ಳುವ ಕಾರಣದಿಂದ ಅಪಘಾತ ಪ್ರಕರಣ ಹೆಚ್ಚುತ್ತಿವೆ. ಅವುಗಳನ್ನು ತೆರವುಗೊಳಸಿಬೇಕು. ಹಾಗೆಯೇ ಅಂಡರ್ ಪಾಸ್ ರಸ್ತೆ ಬದಿ ವ್ಯಾಪಾರಿಗಳು ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ನಿಯಮಾನುಸಾರ ಅಳತೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಟೋಲ್‌ನಲ್ಲಿ ಎಎನ್‌ಪಿಆರ್ ಸಿಸಿಟಿವಿ:
ಇತ್ತೀಚೆಗೆ ಅಪಘಾತ ಮತ್ತು ದರೋಡೆ ಪ್ರಕರಣ ಹೆಚ್ಚಾಗುತ್ತಿವೆ. ಇಂತಹ ಕೃತ್ಯವೆಸಗಿ ತಲೆ ಮರೆಸಿಕೊಳ್ಳುತ್ತಿದ್ದಾರೆ. ಹಾಗಾಗಿ ಹೆದ್ದಾರಿ ಪ್ರಾಧಿಕಾರದ ಟೋಲ್‌ಗಳಲ್ಲಿ ಎಎನ್‌ಪಿಆರ್ ನಂಬರ್ ಪ್ಲೇಟ್ ದಾಖಲು ಮಾಡಿಕೊಳ್ಳುವ ಸಿಸಿಟಿವಿ ಹಾಗೂ ಟೋಲ್‌ನ ಎರಡೂ ಕಡೆ ಚಿತ್ರೀಕರಣ ಮಾಡಿಕೊಳ್ಳುವ ಉತ್ತಮ ಗುಣಮಟ್ಟದ ಪಿಟಿಜಡ್ ಕ್ಯಾಮೆರಾ, ಬೆಳಕಿನ ದೀಪಗಳ ಅಳವಡಿಸುವ ವ್ಯವಸ್ಥೆ ಮಾಡಬೇಕು. ಇದರಿಂದ ಪ್ರಕರಣಕ್ಕೆ ಸಂಬಂಧಿಸಿದವರನ್ನು ಗುರುತಿಸಿ ತ್ವರತವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿವೆ ಎಂದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಲ್ಲಿ ಹೆದ್ದಾರಿ ಪ್ರಾಧಿಕಾರದ ಅಂಬುಲೆನ್ಸ್ ಸರಿಯಾದ ಸಮಯಕ್ಕೆ ಬಾರದೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಂಬುಲೆನ್ಸ್ ಇದ್ದರೂ ಉಪಯೋಗವಾಗುತ್ತಿಲ್ಲ ಎಂದರು.
ಇವರ ಜತೆಗೆ ದನಿಗೂಡಿಸಿದ ಜಿಲ್ಲಾಧಿಕಾರಿ ಅಪಘಾತ ಸಂಭವಿಸಿದಾಗ, ಆಲಸ್ಯ ಮಾಡದೇ ಗೋಲ್ಡನ್ ಅವರ್‌ನಲ್ಲಿ ರಕ್ಷಣೆಗೆ ಧಾವಿಸಿ ಅಮೂಲ್ಯ ಜೀವ ಉಳಿಸಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಜಿಲ್ಲೆಯಲ್ಲಿ ಪ್ರಾಧಿಕಾರದ 3 ಅಂಬುಲೆನ್ಸ್ ಇವೆ. 1033 ಸಂಖ್ಯೆಗೆ ಕರೆ ಮಾಡಿದಲ್ಲಿ ಸಿಬ್ಬಂದಿ ಸಕರಾತ್ಮಕವಾಗಿ ಸ್ಪಂದಿಸಿ ರಕ್ಷಣೆಗೆ ಧಾವಿಸುವರು ಎಂದು ಸಭೆಗೆ ಮಾಹಿತಿ ನೀಡಿದರು.
ಹೂವಿನ ಗೂಡಂಗಡಿ ಸ್ಥಳಾಂತರ:
ನಗರದ ಪಿ.ಬಿ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿಯೇ ಹೂವಿನ ಗೂಡಂಗಡಿಗಳಿವೆ. ಇದೇ ಮಾರ್ಗದಲ್ಲಿ ರೈಲ್ವೆ ನಿಲ್ದಾಣ, ಹರಿಹರ ನಗರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಗೂಡಂಗಡಿಗಳು ಪಾದಚಾರಿ ಮಾರ್ಗದಲ್ಲಿಯೇ ಇರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಬೇರೆಡೆಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಆಟೋಗಳಿಗೆ ಮೀಟರ್, ಡಿಸ್‌ಪ್ಲೇ ಬೋರ್ಡ್:
ನಗರದಲ್ಲಿ ಸಂಚರಿಸುವ ಯಾರೊಬ್ಬರೂ ಮೀಟರ್ ಮತ್ತು ಡಿಸ್‌ಪ್ಲೇ ಬೋರ್ಡ್ ಅಳವಡಿಸದೇ ಹಾಗೂ ನಿಗಧಿತ ದರಕ್ಕಿಂತ ಹೆಚ್ಚಿನ ದರ ಪಡೆದು ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ. ಆದುದರಿಂದ ಎಲ್ಲಾ ಆಟೋ ರಿಕ್ಷಾ ಚಾಲಕರು ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಮತ್ತು ಡಿಸ್‌ಪ್ಲೇ ಬೋರ್ಡ್ ಅಳವಡಿಸಬೇಕು. ತಪ್ಪಿದಲ್ಲಿ ಸಂಬಂಧಿಸಿದವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆಟೋ ಚಾಲಕ ಸಂಘದ ಅಧ್ಯಕ್ಷರಿಗೆ ಕಡಕ್ ಸೂಚನೆ ನೀಡದರು.
ಈ ವೇಳೆ ಡಿಹೆಚ್‌ಓ ಡಾ.ಷಣ್ಮುಖಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಡಿವೈಎಸ್ಪಿ ಶರಣ ಬಸವೇಶ್ವರ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಲ್ಲೇಶಪ್ಪ, ಕೆಎಸ್‌ಆರ್‌ಟಿಸಿ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.