ದಾವಣಗೆರೆ: ಹಾಲು ಒಕ್ಕೂಟಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲು 3 ಸಾವಿರ ರೂ ಲಂಚ ಪಡೆಯುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ (ಸಿಡಿಒ) ಸತೀಶ್ ನಾಯ್ಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿಗೆ ಹೊನ್ನಾಳಿ ತಾಲ್ಲೂಕಿನ ಚೀಲಾಪುರ ಗ್ರಾಮದ ದೇವರಾಜ ಬಳಿ ಸತೀಶ್ ನಾಯ್ಕ ಅವರು 5 ಸಾವಿರ ರೂ ಲಂಚ ಬೇಡಿಕೆ ಇಟ್ಟಿದ್ದರು. ಇದರಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಲೋಕಾ ಪೊಲೀಸರು ದಾಳಿ ನಡೆಸಿ ಹಣದ ಸಮೇತ “ಆರೋಪಿ ವಶಕ್ಕೆ ಪಡೆದಿದ್ದಾರೆ.
Read also : ಲೈಂಗಿಕ ದೌರ್ಜನ್ಯ : ತಂದೆ ವಿರುದ್ದ ಪೋಕ್ಸೋ ಪ್ರಕರಣ ದಾಖಲು
ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದೊಂದಿಗೆ, ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಎಚ್.ಗುರುಬಸವರಾಜ್, ಸರಳಾ ಪಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.