ದಾವಣಗೆರೆ ಜು.02 : ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಪೋರ್ಟಲ್ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆನ್‍ಲೈನ್ ವೆಬ್‍ಸೈಟ್ ಲಿಂಕ್ https://sevasindhu.karnataka.gov.in/Sevasindhu/DepartmentServicesKannada ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.