ದಾವಣಗೆರೆ ನ.8 (Davanagere): ಪರಿಶಿಷ್ಟ ಜಾತಿ ವಿಶೇಷ ಘಟಕ ಮತ್ತು ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದವರು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸ್ಥಾಪಿಸುವ ಜವಳಿ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜವಳಿ ಘಟಕಗಳಿಗೆ ಶೇ.75 ರಷ್ಟು ಅಥವಾ ಗರಿಷ್ಠ ರೂ.2. ಕೋಟಿಗಳವರೆಗೆ ಸಹಾಯಧನ ಪಡೆಯಬಹುದು. ಜವಳಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಅವಶ್ಯವಾದ ನಿವೇಶನ, ಕಟ್ಟಡ ಹೊಂದಿರುವವರಾಗಿರಬೇಕು.
ಆಸಕ್ತರು ಜವಳಿ ಉತ್ಪಾದನಾ ಉದ್ದಿಮೆದಾರರು ಅವಶ್ಯವಿರುವ ದಾಖಲಾತಿಗಳೊಂದಿಗೆ ಡಿಸೆಂಬರ್ 18 ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಚೇರಿಗೆ ಸಲ್ಲಿಸುವುದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ದಾವಣಗೆರೆ ರಾಮಾಂಜನೇಯ ಪ್ಲಾಜಾ ಕಾಲೇಜ್ ರಸ್ತೆ, ನಿಟ್ಟುವಳ್ಳಿ. ದಾವಣಗೆರೆ-577004. ದೂ ಸಂಖ್ಯೆ: 08192-262362 ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Read also : Davanagere | ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ