ದಾವಣಗೆರೆ (Davanagere) : ನಗರದ ಹಳೆಯ ಪ್ರವಾಸಿ ಮಂದಿರದ ಬಳಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತರಗಾರ ಕಿಟ್ ಹಾಗೂ ರಸ್ತೆ ಕೆಲಸ ಮಾಡುವ ಕೆಲಸಗಾರರಿಗೆ ಗುರುವಾರ ಕಿಟ್‌ಗಳನ್ನು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರಿಗೆ ಹಾಗೂ ರಸ್ತೆ ಕೆಲಸ ಮಾಡುವ ಕೆಲಸಗಾರರಿಗೆ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ನೋಂದಾಯಿತ ಕಾರ್ಮಿಕರಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಫಲಾನುಭವಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಇದೇ ವೇಳೆ 30 ಜನ ಕಟ್ಟಡ ಕಾರ್ಮಿಕರಿಗೆ ತರಗಾರ ಕಿಟ್ ಮತ್ತು ರಸ್ತೆ ಕೆಲಸ ಮಾಡುವ ಕೆಲಸಗಾರರಿಗೆ ಕಿಟ್ ವಿತರಿಸಲಾಯಿತು.
ಈ ವೇಳೆ ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ , ಕಾರ್ಮಿಕ ನಿರೀಕ್ಷಕರಾದ ರಾಜಶೇಖರ್ ಹಿರೇಮಠ್, ಆರ್.ನಾಗೇಶ್, ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಆಲೂರು ಸೋಮಣ್ಣ, ಸಿ.ಡಿ.ಮಲ್ಲಿಕಾರ್ಜುನ್, ಹಾಲೇಶಪ್ಪ ಹಾಗೂ ಕಾರ್ಮಿಕರು ಇದ್ದರು.