ದಾವಣಗೆರೆ, ಆ.28 (Davanagere) : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿ.ಯು.ಸಿ., ಡಿಪ್ಲೋಮೋ, ಪದವಿ, ಸ್ನಾತಕೋತ್ತರ, ಬಿ.ಇ., ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
Read also : Davangere Municipal Corporation | ಹೊಲಿಗೆ ಯಂತ್ರ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನ
- ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸುವುದು, ಜಾತಿ ಪ್ರಮಾಣಪತ್ರ. ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ. ಕೊಠಡಿ ಸಂಖ್ಯೆ: 37. ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.