ದಾವಣಗೆರೆ ಡಿ.24 (DAVANAGERE) : ದಾವಣಗೆರೆ ಉಪವಿಭಾಗದ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು(ದೌರ್ಜನ್ಯ ಮತ್ತು ನಿಯಂತ್ರಣ) ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುರ್ನವಸತಿ ಅಧಿನಿಯಮ 2013ರ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಅರಿವು ಹೊಂದಿರುವ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ವರ್ಗದ ಸರ್ಕಾರೇತರ ಸಂಸ್ಥೆಯಲ್ಲಿ (ಎನ್.ಜಿ.ಓ) ಸಕ್ರಿಯವಾಗಿ ಪಾಲ್ಗೊಂಡಿರುವ ವ್ಯಕ್ತಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುರ್ನವಸತಿ ಅಧಿನಿಯಮ 2013ರ ಸ್ಥಾನಕ್ಕೆ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಏಳಿಗೆಗಾಗಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿಯ ಆಸಕ್ತ ಪುರುಷ, ಮಹಿಳೆಯರು ಡಿ.26 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Read also : ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ : ಶಾಸಕ ಕೆ.ಎಸ್. ಬಸವಂತಪ್ಪ