ದಾವಣಗೆರೆ ಏ.17 (Davanagere) : ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪ.ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Read also : ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
ಅರ್ಜಿ ಸಲ್ಲಿಸಲು ಮೇ.3 ರೊಳಗಾಗಿ ವೆಬ್‍ಸೈಟ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕ ಕೆ.ನಾಗರಾಜ ತಿಳಿಸಿದ್ದಾರೆ.