ದಾವಣಗೆರೆ ಮಾ.10 (Davanagere): ಭೂ ಸೇನೆಯಿಂದ ಅಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ ಹಾಗೂ ಹವಾಲ್ದಾರ್ ಬ್ಯಾಂಕ್ ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು, ಮೈಸೂರು. ಮಂಗಳೂರು, ಬೆಳಗಾವಿ, ರಾಯಚೂರು ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶದಿಂದ ಸೈನ್ಯದಲ್ಲಿ ದುರ್ನಡತೆ ಮತ್ತು ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರದ ಆಸಕ್ತ ಮಾಜಿ ಸೈನಿಕರು ಮಾರ್ಚ್ 13 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಮೇಲ್: jtdirpc.kardte@nccindia.nic.in
Read also : JOB NEWS | ವಿಪತ್ತು ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ