ದಾವಣಗೆರೆ (Davanagere) : ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ಫುಡ್‍ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ) ಮೈಸೂರು ಮತ್ತು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಂಜ್‍ಮೆಂಟ್(ಐಹೆಚ್‍ಎಂ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣ ಪಕ್ಕ ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿ.28 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Davanagere | ಮಾಜಿ ದೇವದಾಸಿ ಮಹಿಳೆಯರಿಂದ ಪುನರ್ ವಸತಿ ಯೋಜನೆಗೆ ಅರ್ಜಿ ಆಹ್ವಾನ