ದಾವಣಗೆರೆ (Davanagere): ಪ್ರಸಕ್ತ ಸಾಲಿನಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ-4, ಪರಿಶಿಷ್ಟ ಪಂಗಡದ -3 ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಫೆಬ್ರವರಿ 2 ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230123 ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಕಾವ್ಯ.ಬಿ ತಿಳಿಸಿದ್ದಾರೆ.
Read also : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ