ದಾವಣಗೆರೆ; ಆ.17 (Davanagere) : ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಹಾಗೂ 10,000 ಸಾವಿರ ನಗದು ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಸೆ.18 ರ ಒಳಗಾಗಿ (Department of Women and Child Development davanagere) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ, ಎಂ.ಸಿ.ಸಿ. ಬಿ.ಬ್ಲಾಕ್ ಕುವೆಂಪು ನಗರ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ 08192-264056 ಸಂಖ್ಯೆಗೆ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.