ದಾವಣಗೆರೆ, ಸೆ.5 (davanagere) : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,
Read also : Davanagere | ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ : ಶಾಸಕ ಕೆ.ಎಸ್.ಬಸವಂತಪ್ಪ
ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 10 ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.