ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ((National Portal for Transgender persons) ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‌ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್‌ಕಾರ್ಡ್ನೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ, ಕುವೆಂಪು ನಗರ, ಎಂ.ಸಿ.ಸಿ. ಬಿ. ಬ್ಲಾಕ್, ೧೪ ನೇ ಮುಖ್ಯ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.