ದಾವಣಗೆರೆ, ಸೆ.5 (Davanagere) : 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Read also : Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು ಸೆ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-237480 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.