ದಾವಣಗೆರೆ ಡಿ.12 (Davanagere): ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಗಿರಿಜನ ಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
Read also : ಅವೈಜ್ಞಾನಿಕ ಸೇತುವೆಯಿಂದ ಅಪಘಾತಗಳು ಮತ್ತು ಟ್ರಾಫಿಕ್ ಜಾಮ್ : ಪರ್ಯಾಯ ವ್ಯವಸ್ಥೆಗೆ ಸಂಸದರಿಂದ ಒತ್ತಡ