ದಾವಣಗೆರೆ (Davanagere) : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪ. ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
Read also : Davanagere crime news | ಕಳ್ಳತನ ಪ್ರಕರಣ : ಆರೋಪಿಗಳ ಸೆರೆ , 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ
ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅ. 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.