Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ
ಸಿನಿಮಾ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

Dinamaana Kannada News
Last updated: July 17, 2024 7:05 am
Dinamaana Kannada News
Share
cinema
ರೂಪಾಂತರ" ಚಿತ್ರದ ಟ್ರೇಲರ್ ಬಿಡುಗಡೆ
SHARE

ಬೆಂಗಳೂರು :  ಇತ್ತೀಚೆಗಷ್ಟೆ “ಟರ್ಬೋ” ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ರೂಪಾಂತರ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ‌.

ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ರೂಪಾಂತರ” ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ  ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. “ರೂಪಾಂತರ” ನನಗೆ ಬಹಳ ಇಷ್ಟವಾದ ಸಿನಿಮಾ ಎಂದರು.

ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ  ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ಅವರೆಲ್ಲಾ “ರೂಪಾಂತರ” ಗೊಳ್ಳುವುದೆ ಚಿತ್ರದ ಕಥೆ. “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಚಿತ್ರವನ್ನು ಜುಲೈ 26 ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದರು.

ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು. ಇದೇ 26 ರಂದು  ಚಿತ್ರ ಬಿಡುಗಡೆಯಾಗಲಿದೆ‌. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸುಹಾನ್ ಪ್ರಸಾದ್.

ಐದು ಪ್ರಮುಖಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಮಿಥಿಲೇಶ್ ಎಡವಲತ್.

ಚಿತ್ರದಲ್ಲಿ ನಟಿಸಿರುವ ಅಂಜನ್ ಭಾರದ್ವಾಜ್ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಕುರಿತು ಮಿಥುನ್ ಮುಕುಂದನ್ ಮಾಹಿತಿ ನೀಡಿದರು.

ರಾಜ್ ಬಿ ಶೆಟ್ಟಿ, ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ  ಚಿತ್ರಕ್ಕಿದೆ.  ಭುವನೇಶ್ ಮಣಿವಣ್ಣನ್ ಸಂಕಲನ ಹಾಗೂ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ನಿರ್ಮಾಣ ವಿನ್ಯಾಸವಿರುವ “ರೂಪಾಂತರ ” ಚಿತ್ರಕ್ಕೆ ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುಧ್ಧ ಫಿಲಂಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ. “ರೂಪಾಂತರ” ಟ್ರೇಲರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವನಕರ್ ಅವರು ತಿಳಿಸಿದ್ದಾರೆ.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article dinamaana Muharram ದಿನಮಾನ : ನೆನಪು ಕೆಂಡದ ಬೆಳಕು … ಮೊಹರಂ (Muharram)
Next Article dinamaana ಭದ್ರಾ ಜಲಾಶಯ : ಒಂದೇ ದಿನದಲ್ಲಿ ಮೂರುವರೆ ಅಡಿ ನೀರು ಸಂಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆಯಲ್ಲಿ ಮೈಸೂರಿನ ವಿದ್ವಾನ್ ಪುಟ್ಟಣ್ಣಯ್ಯ ಅವರ ರಂಗಸಂಗೀತ ಸಂಜೆ

ಮೈಸೂರು ನಿವಾಸಿ ವಿದ್ವಾನ್ ವೈ.ಎಂ. ಪುಟ್ಟಣ್ಣಯ್ಯ (ವಿದ್ವಾನ್ ಪುಟ್ಟಣ್ಣಯ್ಯ ) ಅವರ ಹುಟ್ಟೂರು ಹಾಸನ ಜಿಲ್ಲೆ ಅರಸೀಕೆರೆ ಬಳಿಯ ಯರಿಗೇನಹಳ್ಳಿ.…

By ಮಲ್ಲಿಕಾರ್ಜುನ ಕಡಕೋಳ

ಹರಿಹರ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜುಲೈ.13 :  ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ತಾತ್ಕಾಲಿಕ…

By Dinamaana Kannada News

ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ದಾವಣಗೆರೆ (Davanagere) : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ನೇತೃತ್ವದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?