Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ
ತಾಜಾ ಸುದ್ದಿ

DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ

Dinamaana Kannada News
Last updated: July 31, 2024 2:27 pm
Dinamaana Kannada News
Share
davanager
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹಾಗೂ ಅಧಿಕಾರಿಗಳ ತಂಡ ಪ್ರವಾಹದಿಂದ ತೊಂದರೆಯುಂಟಾಗುವ ಪ್ರದೇಶಗಳ ವೀಕ್ಷಣೆ ಮಾಡಿದರು.
SHARE

ದಾವಣಗೆರೆ ಜು 31   (Davangere district ): ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ   ಭದ್ರಾ ಜಲಾಶಯ  (Bhadra Reservoir) ಭರ್ತಿಯಾಗಿದೆ ಮತ್ತು ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು ತುಂಗಭದ್ರಾ ನದಿಯಲ್ಲಿ 1,44,468  ಕ್ಯೂಸೆಕ್ಸ್ಗೆ ಏರಿಕೆಯಾಗಿದ್ದು ಇದು ಅಪಾಯ ಮಟ್ಟವನ್ನು ತಲುಪಿರುವುದರಿಂದ ನದಿಪಾತ್ರದಲ್ಲಿನ ಜನರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ  ಜನರಿಗೆ ಮನವಿ ಮಾಡಿದ್ದಾರೆ.

ಬುಧವಾರ ಹೊನ್ನಾಳಿಯ ಸಾಸ್ವೇಹಳ್ಳಿ, ಬಾಲರಾಜ್‌ಘಾಟ್, ಬಂಬೂ ಬಜಾರ್ ಪ್ರದೇಶಗಳಿಗೆ ಶಾಸಕರಾದ ಡಿ.ಜಿ.ಶಾಂತನಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರವಾಹದಿಂದ ತೊಂದರೆಯುAಟಾಗುವ ಪ್ರದೇಶಗಳ ವೀಕ್ಷಣೆ ಮಾಡಿದರು.

ತುಂಗಾ ನದಿಯಿಂದ 82053   ಮತ್ತು ಭದ್ರಾದಿಂದ 62415   ಕ್ಯೂಸೆಕ್ಸ್ ನೀರು ಬರುತ್ತಿದ್ದು ತುಂಗಭದ್ರಾ ನದಿಯಲ್ಲಿ ಒಂದೂವರೆ ಲಕ್ಷ ಕ್ಯೂಸೆಕ್ಸ್ವರೆಗೆ ನದಿಯಲ್ಲಿ ನೀರು ಹರಿಯುತ್ತಿದೆ. ಇದರಿಂದ ಹೊನ್ನಾಳಿ ಬಾಲರಾಜ್‌ಘಾಟ್, ಬಂಬೂ ಬಜಾರ್ ಪ್ರದೇಶದ ನದಿಪಾತ್ರದಲ್ಲಿನ ಮನೆಗಳಿಗೆ ನೀರು ಬರಲಿದೆ. ಇದಕ್ಕಾಗಿ ಅಂಬೇಡ್ಕರ್ ಭವನ ಇಲ್ಲಿ  2೦ ಕುಟುಂಬಗಳ  93  ಜನರು, ಗುರುಭವನದಲ್ಲಿ 6 ಕುಟುಂಬದ 27  ಜನರಿಗೆ ಕಾಳಜಿ ಕೇಂದ್ರ ತೆರೆದು ಪ್ರವಾಹಪೀಡಿತ ಪ್ರದೇಶದಿಂದ ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಮತ್ತು ಹರಿಹರದಲ್ಲಿನ ಗಂಗಾನಗರದಲ್ಲಿನ ಪ್ರವಾಹ ಉಂಟಾಗಬಹುದೆAದು ಎಪಿಎಂಸಿಯಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ನದಿಗೆ ಇಳಿಯದಂತೆ ಎಚ್ಚರಿಕೆ, ನಿಷೇಧ, ಸನ್ನದ್ದವಾದ ಎಸ್‌ಡಿಆರ್‌ಎಫ್, ಅಗ್ನಿಶಾಮಕ ಪಡೆ; ತುಂಗಭದ್ರಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಎಸ್.ಡಿ.ಆರ್.ಎಫ್ ಪಡೆ ಮತ್ತು ಅಗ್ನಿ ಶಾಮಕ ಇಲಾಖೆ ತಂಡವು ರಕ್ಷಣಾ ಪರಿಕರಗಳೊಂದಿಗೆ ಸನ್ನದ್ದವಾಗಿಡಲಾಗಿದೆ. ಮತ್ತು ನದಿಪಾತ್ರದಲ್ಲಿ ಜನ, ಜಾನುವಾರುಗಳು ನದಿಗೆ ಇಳಿಯದಂತೆ ಅಪಾಯಕಾರಿ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ್ತು ಗ್ರಾಮ ಮಟ್ಟದಲ್ಲಿನ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮಾಡಿ ನದಿಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮಾಡಳಿತ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರರು ಕಟ್ಟೆಚ್ಚರ ವಹಿಸಲು ಸೂಚನೆ ನೀಡಿ ನದಿಗೆ ಇಳಿಯದಂತೆ ಡಂಗೂರ ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

Read also : ತುಂಗಾ ಭದ್ರಾ ನದಿ : ನದಿ ದಾಟಿ ಅಂತ್ಯಕ್ರಿಯೆ

ಪಥ ಬದಲಿಸಲು ಸೂಚನೆ;  ನದಿ ಪ್ರವಾಹದಿಂದ ಕೆಲವು ರಸ್ತೆ ಸಂಪರ್ಕಗಳು ಕಡಿತವಾಗಿದ್ದು ಇಲ್ಲಿ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನ ವಿಜಯಪುರ-ಕೋಟೆಮಲ್ಲೂರು ರಸ್ತೆ ಬದಲಾಗಿ ಹಾರಕೆರೆ ರಸ್ತೆ, ಕಮ್ಮಾರಗಟ್ಟೆ-ಬೆನಕನಹಳ್ಳಿ ಬದಲಾಗಿ ಕೈಮರ ಕ್ಯಾಂಪ್ ರಸ್ತೆ, ಹರಿಹರ ತಾ; ನಂದಿಗುಡಿ-ಪತ್ಯಾಪುರ-ಉಕ್ಕಡಗಾತ್ರಿ ರಸ್ತೆ ಸೇತುವೆ ಮುಳುಗಡೆಯಾಗಿದ್ದು ಇದರ ಬದಲಾಗಿ ನಂದಿಗುಡಿ-ತುAಮ್ಮಿನಕಟ್ಟೆ ರಸ್ತೆ ಬಳಕೆಗೆ ಸೂಚಿಸಲಾಗಿದೆ.

ಹೊನ್ನಾಳಿ ಬೇಸ್ ಸ್ಟೇಷನ್;  ಹೊನ್ನಾಳಿಯಲ್ಲಿ ತುಂಗಭದ್ರಾ ನದಿಯ ನೀರಿನ ಮಟ್ಟ ಅಳತೆಗೆ ಕೇಂದ್ರ ವಾಟರ್ ಬೋರ್ಡ್ನ ಬೇಸ್ ಸ್ಟೇಷನ್ ಇದ್ದು ಇಲ್ಲಿ ಜುಲೈ 31 ರ ಸಂಜೆ 6  ಗಂಟೆ ವೇಳೆಗೆ 12. 06  ಮೀಟರ್ ಪ್ರಮಾಣದಲ್ಲಿ ನೀರು ಹರಿಯುತ್ತಿದೆ, ಇದು ಅಪಾಯ ಮಟ್ಟವಾಗಿದೆ. ಈ ಸ್ಟೇಷನ್‌ನಲ್ಲಿ 10. 45  ಮೀಟರ್ ಹರಿವು ದಾಖಲಾದರೆ ಅಪಾಯದ ಮಟ್ಟ ಎಂದೇ ಪರಿಗಣಿಸಲಾಗುತ್ತದೆ. 12. 57  ಮೀಟರ್ ದಾಖಲಾದರೆ ಪ್ರವಾಗ ಉಂಟಾಗಿ ಹಾನಿಯ ಮಟ್ಟವೆಂದು ಪರಿಗಣಿಸಲಾಗುತ್ತದೆ. ಪ್ರತಿ ಗಂಟೆಗೆ ಇಲ್ಲಿನ ದಾಖಲೆಯಲ್ಲಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ.

ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077  ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ 7411308591,  ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112,   ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444  ದಾವಣಗೆರೆ ತಾ; ಕಚೇರಿ 9036396101 , ಹರಿಹರ 08192-272959,  ಜಗಳೂರು 08196-227242  ಹೊನ್ನಾಳಿ 08188-252108,   ನ್ಯಾಮತಿ 8073951245,   ಚನ್ನಗಿರಿ 7892481962   ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE : ಖೋಟಾ ನೋಟು ಚಲಾವಣೆ : ಆರೋಪಿಗಳಿಗೆ ಶಿಕ್ಷೆ
Next Article DAVANAGERE CRIME NEWS CRIME NEWS : ಕತ್ತು ಸೀಳಿ ಪತ್ನಿ ಕೊಲೆಗೈದ ಪತಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 51 : ನೀವು ಊರು ಬಿಟ್ಟು ಯಾಕೆ ಹೋಗುತ್ತಿದ್ದೀರಿ ಎಂದು ಅವರನ್ನು  ಕೇಳುವುದಾದರೂ ಹೇಗೆ?

Kannada News | Sanduru Stories | Dinamaana.com | 11-06-2024 "ಮಣ್ಣು ತೂರುವ ಆಟ" (Sanduru Stories) ಇಲ್ಲಿ…

By Dinamaana Kannada News

ಕಲ್ಯಾಣಮಂಟಪದಲ್ಲಿ ಕಳ್ಳತನ : ಆರೋಪಿ ಬಂಧನ

ದಾವಣಗೆರೆ:  ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿರುವ ಪೊಲೀಸರು 67 ಸಾವಿರ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ದಾವಣಗೆರೆಯ…

By Dinamaana Kannada News

ಅವೈಜ್ಞಾನಿಕ ಸೇತುವೆಯಿಂದ ಅಪಘಾತಗಳು ಮತ್ತು ಟ್ರಾಫಿಕ್ ಜಾಮ್ : ಪರ್ಯಾಯ ವ್ಯವಸ್ಥೆಗೆ ಸಂಸದರಿಂದ ಒತ್ತಡ

ದಾವಣಗೆರೆ (Davanagere): ಭೂಮಿಕ ನಗರದಿಂದ ರಾಮನಗರಕ್ಕೆ ಸಾಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಕೆಳ ಸೇತುವೆಯಿಂದ ಹಲವಾರು ಅಪಘಾತಗಳಿಗೆ ಹಾಗೂ ಟ್ರಾಫಿಕ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?