Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ

Dinamaana Kannada News
Last updated: January 30, 2025 2:10 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಜ.30 (Davanagere) : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು.

ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ.

ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು.

ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು. ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್  2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು.

ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ. 18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.

ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು.  ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳ ಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ.  ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ.

ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ. ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ.

ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು.  ಪಾನ್ ಬ್ರೋಕರ‍್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ  ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.  ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ.  ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳುವುದು. ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು, ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ  ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್‌ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.

Harihara | ಎಸ್‌ಡಿಎಂಸಿ ಅಧ್ಯಕ್ಷರಾಗಿ ಗಣೇಶ್ ಆಯ್ಕೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara | ಎಸ್‌ಡಿಎಂಸಿ ಅಧ್ಯಕ್ಷರಾಗಿ ಗಣೇಶ್ ಆಯ್ಕೆ
Next Article Chiradoni postman sentenced to jail ಸುಕನ್ಯಾ ಸಮೃದ್ದಿ ಯೋಜನೆ ದುರುಪಯೋಗ : ಅಂಚೆ ಪಾಲಕನಿಗೆ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | 2ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ವಿಧಾನಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂವಾದ 25 ಜೆ ಬಿ ಎಂ 2ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್…

By Dinamaana Kannada News

Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ

ದಾವಣಗೆರೆ (Davanagere) ಆ.12 :  2024 ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ…

By Dinamaana Kannada News

Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ

ದಾವಣಗೆರೆ (Davangere District)  :  ಪ್ರಕರಣಗಳ ಶೀಘ್ರ ವಿಲೇವಾರಿ, ಪ್ರಕರಣಗಳ ತನಿಖೆಯಲ್ಲಿ ತನಿಖಾಧಿಕಾರಿಗಳಿಂದ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು, ನೊಂದವರಿಗೆ ನ್ಯಾಯ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?