ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ‘ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್’ (PM-SYM) ಯೋಜನೆಯಡಿ ಪಿಂಚಣಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹತೆ: 18 ರಿಂದ 40 ವರ್ಷ ವಯಸ್ಸಿನ, ಮಾಸಿಕ 15,000 ರೂ.ಗಿಂತ ಕಡಿಮೆ ಆದಾಯವಿರುವ ಅಸಂಘಟಿತ ಕಾರ್ಮಿಕರು ಅರ್ಹರು. (ಆದಾಯ ತೆರಿಗೆ ಪಾವತಿದಾರರು, ಇಎಸ್ಐ, ಪಿಎಫ್ ಮತ್ತು ಎನ್‍ಪಿಎಸ್ ವ್ಯಾಪ್ತಿಗೆ ಒಳಪಟ್ಟವರಿಗೆ ಅವಕಾಶವಿಲ್ಲ).
ಫಲಾನುಭವಿಗಳು: ಬೀದಿ ಬದಿ ವ್ಯಾಪಾರಿಗಳು, ಹಮಾಲಿಗಳು, ಮನೆಗೆಲಸದವರು, ಕೃಷಿ ಮತ್ತು ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯದ ಶ್ರಮಿಕರು.
ಪಿಂಚಣಿ ಮೊತ್ತ: 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3,000 ರೂ. ಖಚಿತ ಪಿಂಚಣಿ ದೊರೆಯಲಿದೆ.
Read also : SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ
ನೋಂದಣಿ: ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಕಾಮನ್ ಸರ್ವೀಸ್ ಸೆಂಟರ್ (CSC) ಅಥವಾ ಎಲ್ಐಸಿ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಚಂದಾದಾರರು ಪಾವತಿಸುವಷ್ಟೇ ಸಮಾನ ಮೊತ್ತದ ವಂತಿಕೆಯನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಡಿಸಿ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಮಿಕಾಧಿಕಾರಿ ಅವಿನಾಶ್, ಡಿಹೆಚ್‍ಒ ಡಾ:ಷಣ್ಮುಖಪ್ಪ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
