ದಾವಣಗೆರೆ ಸೆ.3 (Davanagere ) : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸ ದಾವಣಗೆರೆ ಕೆಲವು ಭಾಗದಲ್ಲಿ ಮಾತ್ರ ಬಾಕಿ ಇದ್ದು ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ ನಗರಕ್ಕೆ ಹೊಂದಿಕೊಂಡಂತೆ ಹಾಗೂ ಕುಂದುವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿ ಸರ್ವೀಸ್ ರಸ್ತೆ ಬಾಕಿ ಇದ್ದು ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದು ಕಾನೂನು ಪ್ರಕಾರ ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಿ ಅಥವಾ ಠೇವಣಿ ಇಟ್ಟು ಕಾಮಗಾರಿ ಮುಂದುವರೆಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿ ಅಗತ್ಯವಿದ್ದಲ್ಲಿ ಪೆÇಲೀಸ್ ರಕ್ಷಣೆ ಒದಗಿಸಿಕೊಡಲಾಗುತ್ತದೆ ಎಂದರು.
Read also : Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ
ಸರ್ವೀನ್ ರಸ್ತೆ ಕಾಮಗಾರಿ ಬಾಕಿ ಇರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡಲು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ, ಉಪವಿಭಾಗಾಧಿಕಾರಿ ಸಂತೋμï ಪಾಟೀಲ್, ತಹಸಿಲ್ದಾರ್ ಅಶ್ವಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.