ದಾವಣಗೆರೆ (Davanagere) : ಕರ್ನಾಟಕ ಲೋಕಸೇವಾ ಆಯೋಗದಿಂದ ಸೆಪ್ಟೆಂಬರ್ 14, 15 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕ್ರಮವಾಗಿ 16, 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟೆಂಬರ್ 14 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಗರದ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 7634 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ. ಸೆ.15 ರಂದು ಬೆಳಗ್ಗೆ 19 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗಿನ ಪತ್ರಿಕೆಗೆ 9946 ಹಾಗೂ ಮಧ್ಯಾಹ್ನದ ಪತ್ರಿಕೆಗೆ 9142 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ.
ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ನಡೆಸಬೇಕು ಮತ್ತು ಕೊಠಡಿಯೊಳಗೆ ಅಭ್ಯರ್ಥಿಗಳನ್ನು ಕಳುಹಿಸುವ ಮೊದಲ ತಪಾಸಣೆ ನಡೆಸಬೇಕೆಂದು ತಿಳಿಸಿ ಯಾವುದೇ ಎಲೆಕ್ರ್ಟಾನಿಕ್ಸ್ ವಸ್ತುಗಳು, ಡಿವೈಸ್ ಗಳನ್ನು ತಾರದಂತೆ ನೋಡಿಕೊಳ್ಳಬೇಕೆಂದು ತಿಳಿಸಿ ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
Read also : Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಿ.ಯು.ಡಿಡಿ ಕರಿಸಿದ್ದಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಹಾಗೂ ವಿವಿಧ ಸೆಂಟರ್ ಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.