ದಾವಣಗೆರೆ (Davanagere) : ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಗರು ನಿರಂತರ ಪಿತೂರಿ ನಡೆಸುತ್ತಿದ್ದು ಸಿದ್ದರಾಮಯ್ಯನವರ ವಿರುದ್ಧ ನಡೆಯುತ್ತಿರುವ ಪಿತೂರಿ ಇದೇ ಮೊದಲಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಕಮಿಟಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ದೂರಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ಪಕ್ಷದ ಬಹುತೇಕ ಎಲ್ಲರೂ ಮೇಲೆ ನಿರಂತರವಾಗಿ ಷಡ್ಯಂತರ ರೂಪಿಸುತ್ತಿರುವ ಬಿಜೆಪಿಗರು ಇಂದೂ ಸಿದ್ದರಾಮಯ್ಯನವರ ವಿರುದ್ಧ ಷಡ್ಯಂತರ ನಡೆಸುತ್ತಿದ್ದಾರೆ ಎಂದರು.
ದೇಶದಲ್ಲಿ ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷದ ಆಳ್ವಿಕೆಯ ರಾಜ್ಯಗಳಲ್ಲಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದು, ಇಂದು 136 ಶಾಸಕರನ್ನು ಹೊಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಶಾಸಕರ ಖರೀದಿಗೆ ಯತ್ನಿಸಿ ವಿಫಲರಾದ ನಂತರ ಭ್ರಷ್ಟಾಚಾರ ರಹಿತ ಆಡಳಿತ ನಡೆಸುಇತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಷಡ್ಯಂತರ ರೂಪಿಸಿದ್ದಾರೆ ಎಂದು ಪ್ರಾಸಿಕ್ಯೂಷನ್‍ಗೆ ಸಂಬಂಧಪಟ್ಟಂತೆ ಮಾತನಾಡಿದರು.
ರಾಜ್ಯಪಾಲರು ತಮ್ಮ ಕಛೇರಿಯನ್ನು ಬಿಜೆಪಿಗರ ಕಛೇರಿಯಾಗಿ ಪರಿವರ್ತಿಸಿದ್ದಾರೆ. ದೂರು ನೀಡಿದ ಕೇವಲ 2 ಗಂಟೆಯಲ್ಲೇ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ. ಆದರೆ ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಮುರುಗೇಶ್ ನಿರಾಣಿ ಮತ್ತು ಶಶಿಕಲಾ ಜೊಲ್ಲೆ ಅವರ ವಿರುದ್ದ ಕೇಳಿರುವ ಪ್ರಾಸಿಕ್ಯೂಷನ್ ವರ್ಷಗಳೇ ಕಳೆದರೂ ಸಹ ಇದುವರೆಗೂ ಅನುಮತಿ ನೀಡಿಲ್ಲ ಎಂದರು.
Read also :Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಕೆಪಿಸಿಸಿ ಉಪಾಧ್ಯಕ್ಷ ಘೋರ್ಪಡೆ, ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್ ಮತ್ತಿತರರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಮಗ್ರೆಸ್ ಅಧ್ಯಕ್ಷೆ ಶ್ರೀಮತಿ ಅನಿತಾಬಾಯಿ ಮಾಲತೇಶ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗ ಘಟಕದ ಅಧ್ಯಕ್ಷ ಕುಕ್ಕವಾಡ ಮಂಜುನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸಿ.ನಿಂಗಪ್ಪ, ಹರಿಹರದ ನಂದಿಗಾವಿ ಶ್ರೀನಿವಾಸ್, ಮೈನುದ್ದೀನ್, ಮಂಜಮ್ಮ, ಮಂಗಳಮ್ಮ, ಸಾಗರ್ ಎಂ.ಹೆಚ್., ಬಾತಿ ಶಿವಕುಮಾರ್, ಡೋಲಿ ಚಂದ್ರು ಮತ್ತಿತರರಿದ್ದರು.