Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್
ತಾಜಾ ಸುದ್ದಿ

Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

Dinamaana Kannada News
Last updated: March 5, 2025 1:08 pm
Dinamaana Kannada News
Share
District Court DAVANAGERE
District Court DAVANAGERE
SHARE

ದಾವಣಗೆರೆ (Davanagere): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ಬುಧವಾರ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕುರಿತಂತೆ ಮಾಹಿತಿ ನೀಡಲು ಏರ್ಪಡಿಸಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿ ಇದಾಗಿದೆ. ರಾಷ್ಟೀಯ ಲೋಕ್ ಅದಾಲತ್ ನ್ನು ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ  ಲೋಕ್ ಅದಾಲತ್ ನಡೆಯಲಿದೆ ಎಂದು ಹೇಳಿದರು.

ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಬಗೆಹರಿಸಲು ಅವಕಾಶವಿದೆ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಸೇರಿದಂತೆ 41965 ಪ್ರಕರಣಗಳು ಬಾಕಿ ಇದ್ದು ಇದರಲ್ಲಿ ಶೇ 50 ರಷ್ಟು ಪ್ರಕರಣಗಳು ಕ್ರಿಮಿನಲ್ ಸ್ವರೂಪದ್ದಾಗಿವೆ. ಬಾಕಿ ಇರುವ ಪ್ರಕರಣಗಳಲ್ಲಿ ಬರುವ ಲೋಕ್ ಅದಾಲತ್‍ನಲ್ಲಿ 11366 ರಾಜಿಯಾಗಬಲ್ಲ ಪ್ರಕರಣಗಳೆಂದು ಗುರುತಿಸಿದ್ದು ಇದರಲ್ಲಿ 8 ರಿಂದ 10 ಸಾವಿರ ಪ್ರಕರಣಗಳನ್ನು ಇತ್ಯರ್ಥ ಮಾಡಲು ಉದ್ದೇಶಿಸಲಾಗಿದೆ ಎಂದರು.

ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ, ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜಿ ಬಗ್ಗೆ ಅನುಕೂಲವಾಗಲಿ ಎಂದು ರಾಜಿ ಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ಮಾರ್ಚ್ 8 ರಂದು ನಡೆಯುವ ರಾಷ್ಟ್ರೀಯ ಲೋಕ್ ಆದಾಲತ್‍ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು.  ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರನ್ನು ದೂರವಾಣಿ ಸಂಖ್ಯೆ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂರವಾಣಿ ಸಂಖ್ಯೆ: 08192-296885, ಹೊನ್ನಾಳಿ ದೂರವಾಣಿ ಸಂಖ್ಯೆ 08188-251732, ಚನ್ನಗಿರಿ: 08189-229195 2 ಜಗಳೂರು: 08196-227600 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.ಮಾತನಾಡಿ ಜನನ ಪ್ರಮಾಣ ಪತ್ರದಲ್ಲಿ ಹಲವು ಲೋಪದೋಷಗಳಿಂದ ಸುಮಾರು 2 ಸಾವಿರ ಪ್ರಕರಣಗಳು ಕೋರ್ಟ್‍ನಲ್ಲಿದ್ದವು, ಇವುಗಳನ್ನು ಆದ್ಯತೆ ಮೇಲೆ ಇತ್ಯರ್ಥ ಮಾಡಲಾಗಿದೆ. ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳು ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಯವರ ಕೋರ್ಟ್‍ನಲ್ಲಿ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಎಲ್ಲಾ ತಹಶೀಲ್ದಾರರ ಬಳಿ 200 ಕ್ಕಿಂತ ಕಡಿಮೆ ಹಾಗೂ ಎರಡು ಉಪವಿಭಾಗಾಧಿಕಾರಿಗಳ ಬಳಿ 250 ಕ್ಕಿಂತ ಕಡಿಮೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 50 ಪ್ರಕರಣಗಳಿಗಿಂತ ಕಡಿಮೆ ಪ್ರಕರಣಗಳಿವೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಗಾಯಾಳುಗಳು ಮತ್ತು ಮರಣ ಹೊಂದಿದವರಿಗೆ ಪರಿಹಾರ ನೀಡಲು ಅವಕಾಶ ಇದ್ದು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಜಂಟಿಯಾಗಿ ಕಾರ್ಯರೂಪಕ್ಕೆ ತಂದು ಅಂತಹ ಪ್ರಕರಣಗಳಲ್ಲಿ ವಾರದಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಎಂ.ನಿವೇದಿತಾ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‍ಕುಮಾರ್, ವಕೀಲರ ಸಂಘದ ಜಿ.ಕೆ.ಬಸವರಾಜ್, ಗೋಪನಾಳು ಎಸ್.ಬಸವರಾಜ್, ಎ.ಎಸ್.ಮಂಜುನಾಥ್ ಇದ್ದರು.

Read also : ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article MLA KS Basavantappa ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ
Next Article Davanagere Davanagere | ರೈತರು ಬೆಳೆ ಸಮೀಕ್ಷೆ ಮಾಡುವಾಗ ನಿಖರ ಬೆಳೆ ನಮೂದಿಸಲು ಡಿಸಿ ಸಲಹೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಶ್ರಾವಣ ಮಾಸ : ಧೂಳೇಹೊಳೆ ಗ್ರಾಮದಲ್ಲಿ ವಿಶೇಷ ಪೂಜೆ

ಹರಿಹರ (Davanagere)   : ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಧೂಳೇಹೊಳೆ ಗ್ರಾಮದ ದುರ್ಗಾಬಿಂಕಾ ದೇವಿ, ಗುಂಡಿ ಬಸವೇಶ್ವರ, ಚೌಡೇಶ್ವರಿ ದೇವಿ,…

By Dinamaana Kannada News

ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  

ದಾವಣಗೆರೆ :      ಬಾರ್‌ಗೆ ಪರವಾನಿಗೆ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಸಸ್ಪೆಂಡ್‌ ಆಗದಂತೆ ಕೆಎಟಿ…

By Dinamaana Kannada News

ನಾಯಕತ್ವ ಗುಣವನ್ನು ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಡಾ.ದಳಪತಿ

ದಾವಣಗೆರೆ:  ಸಾಮಾಜಿಕ ಸಂಬಂಧಗಳ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?