ದಾವಣಗೆರೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
22/12/2020 ರಂದು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಆರೋಪಿ ಸೈಯದ್ ಮೋಸಿನ್ ಎಂಬುವವರು ಮಗಳನ್ನು ಅಪರಹರಿಸಿ ಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸೈಯದ್ ಮೋಸಿನ್ ಗೋವಾ, ಮುಂಭೈಗೆ ನಂತರ ಪುಣೆಗೆ ಕರೆದುಕೊಂಡು ಹೋಗಿ ಅಲ್ಲಿ ರಮಾಬಾಯಿ ಅಂಬೇಡ್ಕರ್ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಂತ್ರಸ್ಥೆಯ ಮೇಲೆ ಒತ್ತಾಯಪೂರ್ವಕವಾಗಿ ಅತ್ಯಾಚಾರ ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದರಿಂದ ಪೋಕ್ಸೋ ಕಾಯ್ದೆ-2012 ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಸಿಪಿಐ ಸತೀಶ ಕುಮಾರ್ ಯು ಈತನ ವಿರುದ್ದ ಘನ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ನಾರಾಯಣ ಹೆಗಡೆ ರವರು ಆರೋಪಿ ಸೈಯದ್ ಮೋಸಿನ್(19) ಮೇಲೆ ಆರೋಪ ಸಾಬೀತಾಗಿದ್ದರಿಂದ ದಿನಾಂಕ: 03-07-2024 ರಂದು ಆರೋಪಿತನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1,00,000/- ರೂ ದಂಡ ವಿಧಿಸಿದ್ದು ಮತ್ತು ಆರೋಪಿಯು ದಂಡದ ಮೊತ್ತದ 1,00,000/-ರೂ ಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ತೀರ್ಪು ನೀಡಿದೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.
ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಸಿಪಿಐ ಸತೀಶ್ ಕುಮಾರ್ .ಯು, ಹಾಗೂ ಸಿಬ್ಬಂದಿಗಳನ್ನು ಹಾಗೂ ಪಿರ್ಯಾದಿದಾರರ ಪರವಾಗಿ ನ್ಯಾಯಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ & ಜಿ. ಮಂಜುನಾಥ ಶ್ಲಾಘಿಸಿದ್ದಾರೆ.