ದಾವಣಗೆರೆ ಅ 23 (Davanagere) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಅ . 25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ. ಇಲ್ಲಿ ವಾಕ್ ಇನ್ ಇಂಟರ್‍ವೀವ್ ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್‍ವೀವ್‍ದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಡಿಪ್ಲೋಮೊ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದು,
Read also : Davanagere | ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ
ಆಸಕ್ತ ಅಭ್ಯರ್ಥಿಗಳು 5 ಬಯೋಡಾಟಾ ಮತ್ತು ಆಧಾರ್ ನಂಬರ್‍ನೊಂದಿಗೆ ಭಾಗವಹಿಸಿ ಈ ವಾಕ್ ಇನ್ ಇಂಟರ್‍ವೀವ್‍ನ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ: 7483808321 08192-259446 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.