ದಾವಣಗೆರೆ, ಆ.27 (Davanagere ) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
Read also : ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ
ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.