ದಾವಣಗೆರೆ: ಆ.01 (Davanagere) : ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಂದಲೇ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ಒದಗಿಸುವತ್ತ ಗಮನ ನೀಡಬೇಕಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಸಂಸ್ಕøತಿ, ಸಂಪ್ರದಾಯಗಳಿಗೆ ಹೆಚ್ಚು ಬೆಲೆಕೊಡುವ ನಮ್ಮ ದೇಶದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮನೋಭಾವ ತರವಲ್ಲ, ಅನುಭವವಿರುವ ಹಿರಿಯ ನಾಗರಿಕರ ಮಾರ್ಗದರ್ಶನ ನಮಗೆ ಬೇಕಾಗುತ್ತದೆ. ಹೀಗಾಗಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
Read also : Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್
ಕಾರ್ಯಕ್ರಮದಲ್ಲಿ ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್, ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ್ ಗಡಿಗುಡಾಳು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ರಾಜನಾಯ್ಕ.ಕೆಎಸ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕರಾದ ಡಾ.ಕೆ.ಕೆ.ಪ್ರಕಾಶ್ ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು.