ದಾವಣಗೆರೆ (Davanagere): ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ನಗರದ ಗೃಹ ಕಚೇರಿಯಲ್ಲಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಹಾಗೂ ಇತರೆ ಕಾರ್ಮಿಕರುಗಳ ಸಮಸ್ಯೆಗಳನ್ನು ಆಲಿಸಿ ನೊಂದವರಿಗೆ ಅಭಯವನ್ನು ನೀಡಿದರು. ಕಾರ್ಮಿಕರುಗಳ ಯಾವುದೇ ಸಮಸ್ಯೆಗಳಿದ್ದರು ಸರ್ಕಾರದೊಂದಿಗೆ ಮತ್ತು ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ತಿಳಿಸುವೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ಸಚಿವರು ಸಾರ್ವಜನಿಕರುಗಳ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಗನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಮುದೇಗೌಡ್ರು ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read also : ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ