Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ
ತಾಜಾ ಸುದ್ದಿ

ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

Dinamaana Kannada News
Last updated: January 5, 2025 12:47 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere):  ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ. ಆದ್ದರಿಂದ ಒಗ್ಗಟ್ಟು, ಸಂಘಟನೆಯೊಂದೇ ಪರಿಹಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯ ಅಭಿಮಾನ ಬಳಗದಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ 537ನೇ ಶ್ರೀ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ, ಮುಂದುವರಿದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಿಕವಾಗಿ ತಪ್ಪು ಎಂದು ಅಭಿಪ್ರಾಯಪಟ್ಟರು.

ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು. ನಾನು ಎಲ್ಲ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ, ಜಾತಿ ಮಾಡುವವರನ್ನು ವಿರೋಧಿಸುತ್ತೇನೆ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ಅವರು ವಿವರಿಸಿದರು. ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ. ಕನಕರು ಮನುಕುಲದ ಏಳ್ಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದು ಬಣ್ಣಿಸಿದರು.

ನಾನು ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ನಾನು ನನ್ನ ದಾರಿ ಸ್ಪಷ್ಟಪಡಿಸಿಕೊಂಡಿದ್ದೀನಿ ಎಂದ ಅವರು, ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಲ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ಮಾತ್ರ ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಕನಕದಾಸರ 500ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್. ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠ, ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀ, ಈಶ್ವರಾನಂದಪುರಿ ಶ್ರೀ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ, ಮುಸ್ಲಿಂ ಧರ್ಮಗುರು ಇಬ್ರಾಹಿಂ ಸಖಾಪಿ ಸಾನ್ನಿಧ್ಯ ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸವಂತಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಮೇಯರ್ ಗೋಣೆಪ್ಪ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಇತರರಿದ್ದರು.

Read also : ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article cm siddaramaiah davangere kanaka jayanthi ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ
Next Article Padma Shri awardee Harekala Hajabba ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕಿದೆ : ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಿ : ಪಿ.ಎಸ್.ವಸ್ತ್ರದ್ ಕರೆ

ದಾವಣಗೆರೆ,ಮಾರ್ಚ್.೨೭: ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ ೭ ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ ೧೦೦ ರಷ್ಟು ಮತದಾನ…

By Dinamaana Kannada News

Davanagere | ಆಸ್ತಿ ತೆರಿಗೆ ಪಾವತಿಸಲು ಶೇ.5 ರಷ್ಟು ರಿಯಾಯಿತಿ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಲು…

By Dinamaana Kannada News

Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ

ದಾವಣಗೆರೆ (Davanagere):  ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅವರು ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ತಮ್ಮ ಗೃಹ ಕಚೇರಿಯ ಆವರಣದಲ್ಲಿ ಕೊಟ್ಯಾಕ್ ಮಹೇಂದ್ರ ಬ್ಯಾಂಕಿನಿಂದ ರೂ.39 ಲಕ್ಷ ರೂಪಾಯಿ ವೆಚ್ಚದ ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಸಾರ್ವಜನಿಕರ ಸೇವೆಗೆ ನೀಡಲಾಗಿದ್ದು, ಅದರ ಹಸ್ತಾಂತರ ಕಾರ್ಯವನ್ನು ನಡೆಸಲಾಯಿತು.…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?