ದಾವಣಗೆರೆ,ಸೆ.20 (Davanagere) : ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ.
ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಮದ್ಯದಂಗಡಿ ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.