ದಾವಣಗೆರೆ, ಸೆ.5 (davanagere) : ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜೆಗೆ ಉರ್ದು ಭಾಷಾ ಭೋದಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Read also : Davanagere job news | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗೆ ಅರ್ಜಿ ಆಹ್ವಾನ
ಆಸಕ್ತರು ಸೆ.10 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಕೆರೆಬಿಳಚಿ ಗ್ರಾಮ, ಚನ್ನಗಿರಿ ತಾ॥ ಕೆರೆಬಿಳಚಿ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದು.
ಉರ್ದು ಉಪನ್ಯಾಸಕರ ಹುದ್ದೆ-1, ವಿದ್ಯಾರ್ಹತೆ-ಎಂ.ಎ, ಬಿ.ಎಡ್ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022,9483075634 ನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.