ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
Read also : ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಅರ್ಜಿಯನ್ನು ಸೇವಾಸಿಂಧು https://sevasindhu.karnataka. gov.in ಪೋರ್ಟ್ಲ ಮೂಲಕ ಸೆಪ್ಟೆಂಬರ್ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರ 08192-250066 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ, ಜಿಲ್ಲಾ ಆಡಳಿತ ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ. ದೂ.ಸಂ: 08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.