ದಾವಣಗೆರೆ (Davanagere) : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿದ್ದಾರೆಎಂದು ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್ ಹೇಳಿದರು.
ಇಲ್ಲಿನ ಪೊಲೀಸ ಕವಾಯತು ಮೈದಾನದಲ್ಲಿ ಪೊಲೀಸ ಇಲಾಖೆ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಪೊಲೀಸರು ವೈಯಕ್ತಿಕ ಜೀವನವನ್ನು ಬದಿಗೊತ್ತಿ ಕರ್ತವ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರ ಆಸ್ತಿ ರಕ್ಷಣೆ ಹಾಗೂ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹರಡಿ ಪ್ರಚೋದನೆ ನೀಡುತ್ತಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ’ ಎಂದರು.
Read Also : Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ
ಎಸ್ಪಿ ಉಮಾ ಪ್ರಶಾಂತ್ ಅವರು ಪೊಲೀಸ ಹುತಾತ್ಮರ ನಾಮಸ್ಮರಣೆ ಮಾಡಿದರು. ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಕರ್ನಾಟಕದ ಐವರು ಸೇರಿದಂತೆ ದೇಶದಲ್ಲಿ 216 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು.
ಪೂರ್ವ ವಲಯದ ಡಿಐಜಿ ಬಿ.ರಮೇಶ್, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ್ ಇದ್ದರು.