Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ
ತಾಜಾ ಸುದ್ದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ

Dinamaana Kannada News
Last updated: December 13, 2024 1:26 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ಡಿ.13 (Davanagere) : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ನೋಂದಣಿ ಕೇಂದ್ರಗಳು ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳ್ಳಿ,  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾÂಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೊಂದಣಿ ಮಾಡಿಕೊಳ್ಳಲು ತಿಳಿಸಿದೆ. ನೊಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುವುದು.

ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫೂಟ್ ನೊಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಫೂಟ್ಸ್  ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್  ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10.00 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು.  ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ  ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.

Read also : ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Minister SS Mallikarjun ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article Davanagere Electrical variation | ಡಿ.14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ…

By Dinamaana Kannada News

ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ

ದಾವಣಗೆರೆ-  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.25ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ 16ರಂದು…

By Dinamaana Kannada News

ದೌರ್ಜನ್ಯ ತಡೆಗಟ್ಟಲು ವ್ಯಾಪಕ ಅರಿವು ಕಾರ್ಯಕ್ರಮಗಳು ನಡೆಯಲಿ : ಡಾ; ನಾಗಲಕ್ಷ್ಮೀ ಚೌಧರಿ

ದಾವಣಗೆರೆ (Davanagere)  : ಮಹಿಳೆ ಹಾಗೂ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?