Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ  ಪ್ರಶ್ನೆ
ರಾಜಕೀಯ

ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ  ಪ್ರಶ್ನೆ

Dinamaana Kannada News
Last updated: March 18, 2024 9:41 am
Dinamaana Kannada News
Share
cm siddaramaya
ಸಿಎಂ ಸಿದ್ದರಾಮಯ್ಯ
SHARE

ಬೆಂಗಳೂರು :

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು.

ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು.

ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?

ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ

ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?

ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು.

ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?

ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು.

ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ? ಎಂದು ಪ್ರಶ್ನಿಸಿದ್ದಾರೆ.

TAGGED:Davanagere Newsdinamaana.comDoes your conscience agree to vote for Yeddyurappa's son?ದಿನಮಾನ.ಕಾಂ.ದಾವಣಗೆರೆ ಸುದ್ದಿಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?ದಿನಮಾನ.ಕಾಂ
Share This Article
Twitter Email Copy Link Print
Previous Article Remembering evenings with the scent of Pond's powder ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು
Next Article Kannada campu remains rural ಕನ್ನಡದ ಕಂಪು ಗ್ರಾಮೀಣದಲ್ಲಿ ಉಳಿದಿದೆ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಸತಿ ಶಾಲೆಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಕ್ಕೆ ಅಹ್ವಾನ

ದಾವಣಗೆರೆ ಜುಲೈ.10 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ…

By Dinamaana Kannada News

Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ಹರಿಹರ (Davangere District) : ಸುಪ್ರೀಂ ಕೋರ್ಟ್‍ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು…

By Dinamaana Kannada News

ವಿಧ್ಯಾಭ್ಯಾಸ ಸಾಲಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ

ದಾವಣಗೆರೆ, ಜೂ.21   : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
liaquat-ali-m-k-congress-leader-davanagere
ರಾಜಕೀಯ

ದಣಿವರಿಯದ ಯುವ ನಾಯಕ ಲಿಯಾಖತ್ ಅಲಿ; ದಣಿವಿಲ್ಲದ ಸೇವೆ

By Dinamaana Kannada News
Actor Ahimsa Chetan
ತಾಜಾ ಸುದ್ದಿ

Harihara | ಸಮ ಸಮಾಜ ನಿರ್ಮಿಸಲು ಯುವ ಜನರು ಪಣ ತೊಡಬೇಕು : ನಟ ಅಹಿಂಸಾ ಚೇತನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?