Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್
Blog

ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್

Dinamaana Kannada News
Last updated: November 17, 2025 5:45 pm
Dinamaana Kannada News
Share
Davanagere
SHARE

ದಾವಣಗೆರೆ ನ.17:  ಅರವತ್ತು ವರ್ಷ ಮೇಲ್ಪಟ್ಟವರು ಹಿರಿಯ ನಾಗರಿಕರಾಗಿದ್ದು, ತಮ್ಮ ಸ್ವಂತ ಗಳಿಕೆ ಅಥವಾ ತಮ್ಮ ಒಡೆತನದ ಆಸ್ತಿಯಿಂದ ತಮ್ಮನ್ನು ಪೋಷಿಸಿಕೊಳ್ಳಲು ಸಾಧ್ಯವಾಗದ ಪಾಲಕರು ಹಿರಿಯ ನಾಗರಿಕರ ಪಾಲನೆ-ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆಯಡಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪಾಲಕರ ಪೋಷಕರ ಸಂರಕ್ಷಣಾ ಕಾಯ್ದೆ-2007ರ ಅರಿವು ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

Read also : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಅಸಡ್ಡೆಯಿಂದ ನೋಡದೆ ಗೌರವ, ಆದರಗಳಿಂದ ಕಾಣಬೇಕು.   ತಂದೆ-ತಾಯಿ ನಮ್ಮ ದೇವರಿದ್ದಂತೆ. ಯಾರೇ ಆಗಲಿ ತಮ್ಮ ಹೆತ್ತವರನ್ನು ದೇವರಂತೆ ಕಾಣಬೇಕು. ಮಕ್ಕಳು ಅಥವಾ ಮೊಮ್ಮಕ್ಕಳು ತಮ್ಮ ಪಾಲಕರನ್ನು ಪೋಷಿಸುವ ಜವಾಬ್ದಾರಿ ಹೊಂದಿರುತ್ತಾರೆ. ಅಥವಾ ಅವರ ರಕ್ತ ಸಂಬಂಧಿಯೂ ಸಹ ಹಿರಿಯ ನಾಗರಿಕರನ್ನು ನೋಡಿಕೊಳ್ಳಲು ಬದ್ಧರಾಗಿರುತ್ತಾರೆ. ಆದರೆ ಇಂತಹ ಹೆತ್ತವರು ಅಥವಾ ಹಿರಿಯ ನಾಗರಿಕರು ಯಾರ ರಕ್ಷಣೆಗೂ ಒಳಪಡದಿದ್ದರೆ, ಈ ಕಾಯ್ದೆಯಡಿಯಲ್ಲಿ ರಚಿಸಲಾದ ನ್ಯಾಯಮಂಡಳಿಯ ಸಹಾಯ ಪಡೆದು, ಅರ್ಜಿ ಸಲ್ಲಿಸಿ ಜೀವನಾಂಶದ ಪರಿಹಾರ ಪಡೆಯಬಹುದು ಎಂದರು.

ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆಯಡಿ ಲಭ್ಯವಿರುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳು ಪಡೆಯ ಬಹುದಾಗಿದೆ. ಹಿರಿಯ ನಾಗರಿಕರು ಕುಟುಂಬದಲ್ಲಿ ತಮ್ಮ ಮಕ್ಕಳಿಗೆ ಭಾಗಾಂಶ, ದಾನಪತ್ರ, ವಿಲ್ ಇತರ ದಾಖಲೆಗಳನ್ನು ವರ್ಗಾವಣೆ ಮಾಡಿ ಬಳಿಕ ಅಂತಹ ಮಕ್ಕಳಿಂದ ಸರಿಯಾದ ಪೋಷಣೆ, ರಕ್ಷಣೆ ಸಿಗದೆ ಕಿರುಕುಳಕ್ಕೆ ಒಳಗಾದಾಗ ತಮ್ಮ ವ್ಯಾಪ್ತಿಯಲ್ಲಿ ಇರುವ ಉಪ-ವಿಭಾಗಾಧಿಕಾರಿ ಗಳನ್ನು ಭೇಟಿ ಮಾಡಿ ಸಮಸ್ಯೆ ತಿಳಿಸಿ ನಂತರ ಸೂಕ್ತ ದಾಖಲೆಗಳನ್ನು ರದ್ದು ಮಾಡುವ ಅಧಿಕಾರ ಆ ಅಧಿಕಾರಿಗಳಿಗಿದೆ. ಸಂಬಂಧಪಟ್ಟ ಆಸ್ತಿಯು ಮತ್ತೆ ವಾರಸುದಾರರ ಹೆಸರಿಗೆ ಲಭಿಸುತ್ತದೆ.

ಪ್ರತಿಯೊಬ್ಬ ಹಿರಿಯ ನಾಗರಿಕರು ಆತ್ಮಸ್ಥೆರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಜೀವನ ನಡೆಸುವಂತೆ ಮನವಿ ಮಾಡಿದ ಅವರು, ನಿಮಗೆ ಏನೇ ಸಮಸ್ಯೆಯಿದ್ದರೂ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಥವಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಭೇಟಿ ಮಾಡುವಂತೆ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ, ಕಾರ್ಮಿಕ ಅಧಿಕಾರಿ ಪ್ರಸನ್ನ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ, ಡಿಡಿಪಿಐ ಕೊಟ್ರೇಶ್ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article Davanagere ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ…

By Dinamaana Kannada News

Davangere | ಲಾಭದ ಆಸೆಗೆ 3.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ದಾವಣಗೆರೆ  (Davangere) : ಷೇರು ಮಾರುಕಟ್ಟೆಯಲ್ಲಿ ಹಣ ತೊಗಿಸಿದರೆ ಹೆಚ್ಚು ಲಾಭ ಮಾಡಬಹುದು ಎಂದು ನಂಬಿಸಿ ಇಲ್ಲಿನ ಜಯನಗರ ನಿವಾಸಿಗೆ…

By Dinamaana Kannada News

Davangere Crime News | ಗಂಧದ ಮರ ಕಳ್ಳತನ : ಮೂವರು ಆರೋಪಿಗಳ ಬಂಧನ

ದಾವಣಗೆರೆ  (Davangere) : ಗಂಧದ ಮರ ಕಳ್ಳತನ ಮಾಡಿದ್ದ 03 ಆರೋಪಿತರನ್ನು ವಿದ್ಯಾನಗರ ಪೊಲೀಸರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?