ದಾವಣಗೆರೆ : ರಾಜ್ಯ ಸರಕಾರದಿಂದ ಶ್ರೇಷ್ಠ ವೈದ್ಯ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಜಿ.ಡಿ.ಅವರಿಗೆ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಸಮಾರಂಭ ರಾಜ್ಯ ಸರಕಾರ ನೌಕರರ ಭವನದಲ್ಲಿ ನಡೆಯಿತು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ರೋಗವಾಹಕಗಳ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗಂಗಾಧರ, ತಾಲೂಕು ಆರೋಗ್ಯ ಅಧಿಕಾರಿ ಡಾ.ದೇವರಾಜ ಪೆಟಗಿ , ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಖ ಸಂಘದ ರಾಜ್ಯ ಸಂಘಟನಾ ಕಾರ್ಯದಶಿ೯ ಸಿ.ಪರಶುರಾಮಪ್ಪ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮಂಜುನಾಥ,ಡಾ.ರುದ್ರೇಶ್, ಡಾ.ಮಂಜುನಾಥ, ಡಾ.ಹೇಮಂತಕುಮಾರ್, ಡಾ.ಕಿರಣ್ ಗಂಗೂರು, ಡಾ.ಧನಂಜಯ, ಜಿಲ್ಲಾ ಫಾರ್ಮಸಿ ಅಧಿಕಾರಿ ಶಿವಾನಂದ ದಳವಾಯಿ, ಆರೋಗ್ಯಾಧಿಕಾರಿ ನಿರಂಜನ ಮೂರ್ತಿ ಸ್ವಾಗತಿಸಿದರು. ಫಾರ್ಮಸಿ ಅಧಿಕಾರಿ ಮಂಜುನಾಥ ನಿರೂಪಿಸಿದರು.