ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಿಲಾಲ್ ಹಾಗೂ ಕಾಂಗ್ರೆಸ್ ಮುಖಂಡ ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಬಂಧಿತರು. ಇನ್ನು ಮೂವರು ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ವಿದ್ಯಾನಗರ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ ಡ್ರಗ್ಸ್ ಜಾಲ ಪತ್ತೆಯಾಗಿದೆ. ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿಪಡಿಸಿಕೊಂಡಿದ್ದಾರೆ.
ರಾಜಸ್ಥಾನದಿಂದ ಡ್ರಗ್ಸ್ ತಂದು ಉದ್ಯಮಿಗಳು–ವಿದ್ಯಾರ್ಥಿಗಳಿಗೆ ಸರಬರಾಜು ಆರೋಪ ಕೇಳಿ ಬಂದಿದೆ.
Read also : ಗುಣಮಟ್ಟದ ಶಿಕ್ಷಣ ಪಡೆದಲ್ಲಿ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ : ನ್ಯಾ.ಮಹಾವೀರ ಮ ಕರಣ್ಣನವರ
ಈ ಕುರಿತು ಮಾತನಾಡಿದ ಎಸ್ಪಿ ಉಮಾಪ್ರಶಾಂತ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. ಈಗಾಗಲೇ ಪ್ರಕರಣವನ್ನು ಚುರುಕಗೊಳಿಸಲಾಗಿದೆ. ಯಾರೇ ಇಂತಹ ಕೆಲಸ ಮಾಡಿದ್ದರು. ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
