Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿಗೆ ಅವಕಾಶವಿಲ್ಲ : ಶಾಮನೂರು ಶಿವಶಂಕರಪ್ಪ
ತಾಜಾ ಸುದ್ದಿ

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿಗೆ ಅವಕಾಶವಿಲ್ಲ : ಶಾಮನೂರು ಶಿವಶಂಕರಪ್ಪ

Dinamaana Kannada News
Last updated: March 6, 2024 6:31 am
Dinamaana Kannada News
Share
Durgambika Jatre 2024
SHARE

ದಾವಣಗೆರೆ: ನಗರದೇವತೆ ದುರ್ಗಾಂಬಿಕಾ ದೇವಿಯ ಜಾತ್ರೆಯು ಮೂರು ವರ್ಷಗಳಿಗೊಮ್ಮೆ ನಡೆಯಲಿದ್ದು ಮಾ.೧೭ ರಿಂದ ೨೦ ರ ವರೆಗೆ ಅದ್ದೂರಿಯಾಗಿ ಜರುಗುವುದರಿಂದ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ದಾವಣಗೆರೆ ದಕ್ಷಿಣ ಶಾಸಕರು ಹಾಗೂ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಮಂಗಳವಾರ ದುರ್ಗಾಂಬಿಕಾ ದೇವಸ್ಥಾನದ ಆವರಣದಲ್ಲಿ ಜಾತ್ರಾ ಸಿದ್ದತೆ ಪ್ರಯುಕ್ತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತ್ರಾ ಸಂದರ್ಭದಲ್ಲಿ ಲಕ್ಷಾಂತರ ಭಕ್ತಾಧಿಗಳು ಇಲ್ಲಿಗೆ ಆಗಮಿಸುವುದರಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯದ ವ್ಯವಸ್ಥೆ ಸೇರಿದಂತೆ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಜಿಲ್ಲಾ ಆಡಳಿತದಿಂದ ಜಾತ್ರೆಗೆ ಬೇಕಾದ ಎಲ್ಲಾ ನೆರವು ನೀಡಬೇಕು ಮತ್ತು ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಜಾತ್ರೆಯನ್ನು ಸರ್ಕಾರ ಹೇಳಿದ ರೀತಿ ನಡೆಸಲಾಗುತ್ತದೆ, ಪ್ರಾಣಿಬಲಿ ನೀಡುವುದಿಲ್ಲ, ಮೌಢ್ಯಾಚರಣೆ ಮಾಡಲಾಗುವುದಿಲ್ಲ. ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ನಗರ ದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕೆಂದು ತಿಳಿಸಿದರು.

ಸ್ವಚ್ಚತೆ ಮತ್ತು ನೆರಳು; ಲಕ್ಷಾಂತರ ಭಕ್ತಾಧಿಗಳು ಜಾತ್ರಾ ವೇಳೆ ಆಗಮಿಸುವುದರಿಂದ ಇಲ್ಲಿ ಅವರು ತಮ್ಮ ಹರಕೆಯ ವಸ್ತುಗಳನ್ನು ಬಿಡುವುದು, ಹೂ, ಬೇವಿನಸೊಪ್ಪು ತರುವುದರಿಂದ ಆಗಿಂದಾಗ್ಗೆ ತೆರವು ಮಾಡಬೇಕಾಗುತ್ತದೆ. ಇದಕ್ಕಾಗಿ ಪಾಲಿಕೆಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಮತ್ತು ನಿರಂತರ ನೀರು ಸರಬರಾಜು ಮಾಡಬೇಕು. ದೇವಸ್ಥಾನದ ಬಳಿ ಎರಡು ಶೌಚಾಲಯಗಳು ಇದ್ದು ಹೆಚ್ಚುವರಿಯಾಗಿ ಮೊಬೈಲ್ ಟಾಯ್ಲೆಟ್‌ಗಳನ್ನು ಪಾಲಿಕೆಯಿಂದ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಪಾಲಿಕೆ ಆಯುಕ್ತರು ಮಾತನಾಡಿ ಪಾಲಿಕೆಯಿಂದ ಸ್ವಚ್ಚತೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಮತ್ತು ಈಗಾಗಲೇ ಇಲ್ಲಿನ ರಸ್ತೆ ಗುಂಡಿ ಮುಚ್ಚಲು, ಚರಂಡಿ ದುರಸ್ಥಿಗೆ ಹಾಗೂ ಈ ಭಾಗದಲ್ಲಿನ ೪೦ ದೇವಸ್ಥಾನಗಳ ಸುಣ್ಣ ಬಣ್ಣಕ್ಕಾಗಿ ಪಾಲಿಕೆಯಿಂದ ರೂ. ೨ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.

ದುರ್ಗಾಂಬಿಕಾ ಜಾತ್ರೆ ವೇಳೆ ನಿರಂತರ ವಿದ್ಯುತ್

ಜಾತ್ರೆಯಲ್ಲಿ ಹೆಚ್ಚು ಜನರು ಭಾಗವಹಿಸುವುದರಿಂದ ರಾತ್ರಿ ವೇಳೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಜೊತೆಗೆ ಎಲ್ಲಿಯೂ ಶಾಟ್‌ಸಕ್ರ‍್ಯೂಟ್ ಆಗದ ರೀತಿ ನೋಡಿಕೊಂಡು ಇಲ್ಲಿಗೆ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಬೆಸ್ಕಾಂ ಇಂಜಿನಿಯರ್‌ಗೆ ತಿಳಿಸಲಾಯಿತು.

ದುರ್ಗಾಂಬಿಕಾ ಜಾತ್ರೆ ವೇಳೆ  ಆರೋಗ್ಯ ರಕ್ಷಣೆ

ಜಾತ್ರಾ ವೇಳೆ ಹೆಚ್ಚು ಜನರು ಭಾಗವಹಿಸುವುದರಿಂದ ಈಗ ಬಿಸಿಲು ಹೆಚ್ಚಿದೆ, ಜನಸಂದಣಿ ಜಾಸ್ತಿಯಾಗುವುದರಿಂದ ಕೆಲವು ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು ಪಾಲಿಕೆಯಿಂದ ಚರಂಡಿಗಳಿಗೆ ರಾಸಾಯಿನಿಕ ಸಿಂಪರಣೆ ಮಾಡಬೇಕು. ಆರೋಗ್ಯ ಇಲಾಖೆಯಿಂದ ಮೊಬೈಲ್ ಚಿಕಿತ್ಸಾಲಯ ನಿಯೋಜಿಸಿ ತುರ್ತು ಸೇವೆಗಾಗಿ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ; ಜಾತ್ರಾ ವೇಳೆ ಭಕ್ತಾಧಿಗಳು ಮೂಢನಂಬಿಕೆಗಳನ್ನು ಆಚರಣೆ ಮಾಡುವ ಸಾಧ್ಯತೆ ಇದ್ದು ಸಿಬ್ಬಂದಿಗಳ ನೇಮಕ ಮಾಡುವ ಮೂಲಕ ತೀವ್ರ ನಿಗಾವಹಿಸಲು ತಿಳಿಸಲಾಯಿತು.

ಪೊಲೀಸ್ ಬಂದೋಬಸ್ತ್

ಜಾತ್ರಾ ವೇಳೆ ಜನಸಂದಣಿ ಹೆಚ್ಚಿರುವುದರಿಂದ ಜೇಬುಗಳ್ಳರು, ಸರಗಳ್ಳಲು ಹೆಚ್ಚಾಗುವ ಸಂದರ್ಭವಿರುತ್ತದೆ. ಎಲ್ಲಾ ಕಡೆ ಸಿಸಿ ಕ್ಯಾಮೆರಾ ಅಳವಡಿಕೆಯನ್ನು ದೇವಸ್ಥಾನ ಸಮಿತಿಯಿಂದ ಮಾಡಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

೧೮ ಕಡೆ ಚೆಕ್ ಪೋಸ್ಟ್ಗಳ ನಿರ್ಮಾಣ ಮಾಡಲಾಗುತ್ತದೆ, ರಸ್ತೆ ಬದಿಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಅವಕಾಶ ಮಾಡಿಕೊಡದೆ ಸುಗಮ ಸಂಚಾರಕ್ಕಾಗಿ ಅನುಕೂಲ ಮಾಡಿಕೊಡಬೇಕು. ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ಪೋಸ್ಟ್ಗಳನ್ನು ಹಾಕಬಾರದು. ಜಾತ್ರಾ ವೇಳೆ ಜಗಳಗಳು ನಡೆಯದಂತೆ ದೇವಸ್ಥಾನ ಸಮಿತಿಯಿಂದ ಸ್ವಯಂ ಸೇವಕರನ್ನು ನೇಮಿಸುವ ಮೂಲಕ ಆಗಮಿಸುವ ಭಕ್ತರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ನೋಡಿಕೊಂಡು ಅನಾವಶ್ಯಕವಾಗಿ ಪೊಲೀಸ್ ಭಾಗಿಯಾಗದಂತೆ ನೋಡಿಕೊಳ್ಳಬೇಕೆಂದರು.

ಪ್ಲೆಕ್ಸ್, ಬಂಟಿAಗ್ಸ್ ಅನುಮತಿ ಬೇಕು

ಜಾತ್ರಾ ವೇಳೆ ಪ್ಲೆಕ್ಸ್, ಬಂಟಿAಗ್ಸ್ ಹಾಕುವವರು ಪಾಲಿಕೆಯಿಂದ ಅನುಮತಿ ಪಡೆದುಕೊಂಡಿರಬೇಕು. ಅನುಮತಿ ಇಲ್ಲದೇ ಇರುವು ಪ್ಲಕ್ಸ್ಗಳಿಗೆ ಅವಕಾಶ ಇರುವುದಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ಮಿತಿಗೊಳಿಸಿ ಪರಿಸರ ಸ್ನೇಹಿ ಜಾತ್ರೆ ಆಚರಣೆಗೆ ಮುಂದಾಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದ್ದು ಇದನ್ನು ಪಾಲನೆ ಮಾಡಬೇಕಾಗುತ್ತದೆ. ಜಾತ್ರಾ ಸಂದರ್ಭದಲ್ಲಿ ಎಲ್ಲ ವ್ಯವಸ್ಥೆಗಳ ನಿರ್ವಹಣೆಗಾಗಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಟ್ರಸ್ಟ್ ಸದಸ್ಯರಾದ ಚನ್ನಬಸಪ್ಪನವರು ಎಲ್ಲರ ಸಹಕಾರದಿಂದ ಜಾತ್ರೆಯನ್ನು ಸುಗಮವಾಗಿ ನಡೆಸಿಕೊಂಡು ಹೋಗೋಣ ಎಂದರು.

ಸಭೆಯಲ್ಲಿ ಪಾಲಿಕೆ ಮೇಯರ್ ವಿನಾಯಕ್ ಬಿ.ಹೆಚ್, ಟ್ರಸ್ಟ್ ಸದಸ್ಯ ವೀರಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸAತೋಷ್, ಮಂಜುನಾಥ್, ಪಾಲಿಕೆ ಆಯುಕ್ತರಾದ ರೇಣುಕಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಡಾ; ಅಶ್ವಥ್ ಎಂ.ಬಿ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.

TAGGED:Davangere NewsDinamana.comDurgambika Jatre 2024ದಾವಣಗೆರೆ ದುರ್ಗಾಂಬಿಕಾ ಜಾತ್ರೆದಾವಣಗೆರೆ ಸುದ್ದಿದಿನಮಾನ.ಕಾಂ.Davangere Durgambika Jatreದುರ್ಗಾಂಬಿಕಾ ಜಾತ್ರೆ ೨೦೨೪
Share This Article
Twitter Email Copy Link Print
Previous Article small story by a fukkruddin ಸಣ್ಣ ಕಥೆ: ಎ.ಫಕೃದ್ದೀನ್
Next Article I am a strong CM ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಬೇಕು : ಜಿ.ಎಸ್.ಸುಭಾಷ್ ಚಂದ್ರ ಬೋಸ್

ದಾವಣಗೆರೆ  :  109 ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸಾಹಿತ್ಯ…

By Dinamaana Kannada News

Davanagere | ಮದ್ಯ ಮಾರಾಟ ನಿಷೇಧ 

ದಾವಣಗೆರೆ,ಸೆ.20 (Davanagere) :  ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ…

By Dinamaana Kannada News

ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ

ದಾವಣಗೆರೆ:  ಲೋಕಸಭಾ ಚುನಾವಣೆ ನಿಮಿತ್ತ ಮತ ಯಾಚನೆ ಮಾಡಲು ದಾವಣಗೆರೆಗೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಆಶ್ವಾಸನೆ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?