Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಂತ್ರಜ್ಞಾನ > ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ
ತಂತ್ರಜ್ಞಾನ

ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ

Dinamaana Kannada News
Last updated: March 11, 2024 5:05 pm
Dinamaana Kannada News
Share
SHARE

ದಾವಣಗೆರೆ,ಮಾ.11ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು ಇದರ ಅನುಷ್ಠಾನ ಮಾರ್ಚ್ 13 ರಿಂದ ಜಾರಿಗೆ ಬರಲಿದೆ. ಆದರೆ ಸ್ವಯಂಪ್ರೇರಿತವಾಗಿ ಕನ್ನಡ ಭಾಷೆ ಪ್ರದರ್ಶನಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ 2022 ಮತ್ತು ತಿದ್ದುಪಡಿ ವಿಧೇಯಕ-2024 ರನ್ವಯ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿನ ಎಲ್ಲಾ ಉದ್ದಿಮೆಗಳು, ಕಾರ್ಖಾನೆಗಳು, ಬ್ಯಾಂಕ್‍ಗಳು, ಸಂಘ, ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಶಾಲಾ, ಕಾಲೇಜುಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯ ಪ್ರದರ್ಶನ ಇರಲೇಬೇಕಾಗುತ್ತದೆ. ಕನ್ನಡವನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿದ್ದಲ್ಲಿ 5 ಸಾವಿರದಿಂದ 10 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ. ರಾಜ್ಯದ ಆಡಳಿತ ಭಾಷೆ ಕನ್ನಡವಾಗಿರುವುದರಿಂದ ಎಲ್ಲರೂ ಸ್ವಯಂ ಪ್ರೇರಿತವಾಗಿ ಕನ್ನಡ ಬಳಕೆ ಮಾಡಬೇಕು. ಒಂದು ವೇಳೆ ಸಂಪೂರ್ಣವಾಗಿ ಕನ್ನಡ ಬಳಕೆ ಮಾಡುವುದಾದರೇ ಯಾವುದೇ ಅಭ್ಯಂತರ ಇರುವುದಿಲ್ಲ. ಬ್ಯಾಂಕ್, ಉದ್ದಿಮೆಗಳು ತ್ರಿಭಾಷಾ ಸೂತ್ರ ಪಾಲನೆ ಮಾಡುತ್ತಿದ್ದಲ್ಲಿ ಮೊದಲ ಸಾಲಿನಲ್ಲಿ ಕನ್ನಡ ಭಾಷೆ ಇರಬೇಕು ಎಂದರು.
ಜಿಲ್ಲೆಯ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆದ 12846 ಜನರು ಇದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಮಾಡಲಾಗಿದ್ದು ಶೇ 50 ಕ್ಕಿಂತಲೂ ಹೆಚ್ಚಿದೆ. ಇದನ್ನು ಶೇ 100 ರಷ್ಟು ಎಲ್ಲಾ ಉದ್ದಿಮೆಗಳು, ಸಂಸ್ಥೆಗಳಲ್ಲಿ ಅನುಷ್ಠಾನ ಮಾಡಲು ಕಾರ್ಯಪಡೆಯನ್ನು ರಚಿಸಲಾಗಿದೆ. ಕಾನೂನು ಅನುಷ್ಠಾನಕ್ಕೂ ಮೊದಲು ಸ್ವಯಂ ಪ್ರೇರಿತವಾಗಿ ಅಳವಡಿಸಿಕೊಳ್ಳಲು ಮಾರ್ಚ್ 13 ರ ವರೆಗೆ ಅವಕಾಶ ನೀಡಲಾಗಿದ್ದು ನಂತರದಲ್ಲಿ ಅನುಷ್ಠಾನ ಮಾಡದ ಉದ್ದಿಮೆದಾರರು, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವ ಮೂಲಕ ಕಡ್ಡಾಯವಾಗಿ ಅನುಷ್ಠಾನ ಮಾಡಲು ಆಯಾ ವಿಭಾಗದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ಗ್ರಾಮೀಣ ಭಾಗದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಉದ್ದಿಮೆ, ಸಂಘ, ಸಂಸ್ಥೆಗಳಲ್ಲಿ ನಾಮಫಲಕದಲ್ಲಿ ಕನ್ನಡ ಭಾಷೆಯ ಶೇ 60 ರಷ್ಟು ಪ್ರದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕರಾದ ಮಹಂತೇಶ್ ಮಾತನಾಡಿ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಪರವಾನಗಿ ಪಡೆದವರಿಗೆ ಸೂಚನಾ ಪತ್ರ ನೀಡುವ ಮೂಲಕ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಭಾಷೆಯ ಪ್ರದರ್ಶನ ಮಾಡುವಂತೆ ತಿಳಿಸಲಾಗಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಇದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಪಾಲಿಕೆ ಆಯುಕ್ತರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಇಲಾಖೆ ಅಧಿಕಾರಿಗಳು ಸದಸ್ಯರಿರುವರು.
ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಿತಿ ಇದ್ದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು ಸದಸ್ಯರಿದ್ದು ತಹಶೀಲ್ದಾರರು ಸದಸ್ಯ ಕಾರ್ಯದರ್ಶಿಯಾಗಿರುವರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ವಾಮದೇವಪ್ಪ, ಕನ್ನಡ ಪರ ಸಂಘಟನೆಯ ರಾಮೇಗೌಡ, ಶಿವಣ್ಣ, ನಾಗೇಂದ್ರ ಬಂಡೇಕರ್, ಸುಧಾಕರ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

TAGGED:davanagere suddiDc dvgdinamaana.comಡಿಸಿ ಡಿವಿಜಿದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Blood donation ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ
Next Article protest dvg ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಹೇಶ ಜೋಶಿ ವಿರುದ್ದ ಕ್ರಮಕ್ಕೆ ಪ್ರೋ.ಸಿದ್ದರಾಮಯ್ಯ ಒತ್ತಾಯ

ದಾವಣಗೆರೆ (Davanagere) : ಕನ್ನಡ ಸಾಹಿತ್ಯ ಪರಿಷತ್‍ನ ಆರ್ಥಿಕ ಅಶಿಸ್ತು  ಹದಗೆಡಿಸಿರುವ ಹಾಗೂ ಸರ್ವಾಧಿಕಾರಿ ಧೋರಣೆ ಅನುಸರಿತ್ತಿರುವ ಅಧ್ಯಕ್ಷ ಮಹೇಶ…

By Dinamaana Kannada News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು (Benagalore): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು…

By Dinamaana Kannada News

ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 

ದಾವಣಗೆರೆ, ಜ.12 (Davanagere):  ವೇಗವಾಗಿ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿ ಪ್ರತಿಯೊಬ್ಬರು ಧಾವಂತದ ಬದುಕನ್ನು ಅನುಸರಿಸುತ್ತಿದ್ದು, ಇಂದಿನ ಒತ್ತಡಮಯ ಬದುಕಿಗೆ ಪ್ರತಿಯೊಬ್ಬರು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?